5006 | DEU 3:29 | ಆಗ ನಾವು ಬೇತ್ಪೆಗೋರಿಗೆ ಮುಂದೆ ಇದ್ದ ಕಣಿವೆಯಲ್ಲಿ ವಾಸವಾಗಿದ್ದೆವು. |
5052 | DEU 4:46 | ಅವರು ಯೊರ್ದನ್ ನದಿಯ ಆಚೆ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು. |
5067 | DEU 5:12 | “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು. |
5070 | DEU 5:15 | ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ. |
5847 | DEU 34:6 | ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು. |
6077 | JOS 10:11 | ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು. |
6106 | JOS 10:40 | ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು. |
6167 | JOS 13:11 | ಗೆಷೂರ್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ, |
6169 | JOS 13:13 | ಇಸ್ರಾಯೇಲ್ಯರು ಗೆಷೂರ್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ. |
6176 | JOS 13:20 | ಬೇತ್ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ, |
6572 | JDG 3:2 | ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ, |
6718 | JDG 7:22 | ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು. |
6760 | JDG 9:4 | ಮತ್ತು ಅವರು ಬಾಳ್ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ, |
6849 | JDG 11:18 | ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ. |
7112 | JDG 21:8 | ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು. |
7130 | RUT 1:1 | ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು. |
8745 | 1KI 1:25 | ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ. |
8878 | 1KI 5:11 | ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು. |
8960 | 1KI 7:23 | ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ. |
9052 | 1KI 8:64 | ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು. |
10032 | 2KI 18:4 | ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು. |
10397 | 1CH 4:8 | ಕೋಚನಿಂದ ಅನೂಬ್ ಮತ್ತು ಚೊಬೇಬ್ ಹುಟ್ಟಿದರು. ಅಹರ್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ. |
11447 | 2CH 12:5 | ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು. |
11480 | 2CH 13:22 | ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ. |
12538 | NEH 9:23 | ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ. |
12565 | NEH 10:13 | ಜಕ್ಕೂರ್, ಶೇರೇಬ್ಯ, ಶೆಬನ್ಯ, |
27214 | ACT 7:29 | ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು. |
27437 | ACT 13:6 | ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. |
27700 | ACT 20:6 | ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು. |
27709 | ACT 20:15 | ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು. |
27733 | ACT 21:1 | ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು. |
27760 | ACT 21:28 | “ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು. |
29529 | PHP 4:20 | ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್. |