94 | GEN 4:14 | ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. |
1478 | GEN 49:4 | ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು! |
1561 | EXO 2:6 | ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು. |
1583 | EXO 3:3 | ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು. |
1585 | EXO 3:5 | ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು. |
1605 | EXO 4:3 | ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು. |
1649 | EXO 5:16 | ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು. |
2470 | EXO 32:31 | ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ. |
4229 | NUM 16:34 | ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು. |
4253 | NUM 17:23 | ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು! |
4358 | NUM 21:17 | ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ |
4370 | NUM 21:29 | ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು. |
4427 | NUM 23:10 | ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು. |
4440 | NUM 23:23 | ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’ |
4470 | NUM 24:23 | ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು? |
5330 | DEU 15:9 | ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ. |
5448 | DEU 20:19 | ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ? |
5680 | DEU 28:67 | ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ. |
5789 | DEU 32:29 | ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು! |
6062 | JOS 9:23 | ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು. |
6628 | JDG 5:3 | “ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು. |
6637 | JDG 5:12 | ‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’ |
6648 | JDG 5:23 | ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’ |
6653 | JDG 5:28 | “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು. |
6724 | JDG 8:3 | ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು. |
7306 | 1SA 4:7 | ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ. |
7307 | 1SA 4:8 | ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ! |
8202 | 2SA 7:19 | ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ. |
8205 | 2SA 7:22 | ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ. |
8208 | 2SA 7:25 | ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ. |
8211 | 2SA 7:28 | ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು. |
8212 | 2SA 7:29 | ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ” ಎಂದು ವಿಜ್ಞಾಪಿಸಿದನು. |
8514 | 2SA 19:1 | ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು. |
8518 | 2SA 19:5 | ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು. |
8622 | 2SA 22:17 | ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು. |
9217 | 1KI 13:30 | ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು. |
9381 | 1KI 18:37 | ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು. |
9383 | 1KI 18:39 | ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು. |
9603 | 2KI 3:23 | ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು. |
9658 | 2KI 5:7 | ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು. |
9847 | 2KI 11:14 | ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು. |
10087 | 2KI 19:22 | ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ! |
10089 | 2KI 19:24 | ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?” |
10743 | 1CH 12:19 | ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು. |
11222 | 2CH 2:5 | ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು! |
11728 | 2CH 25:19 | ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು. |
12315 | NEH 2:3 | ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು. |
12368 | NEH 3:36 | ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು. |
13052 | JOB 8:19 | ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ! |
13105 | JOB 10:15 | ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು. |
13117 | JOB 11:5 | ಆಹಾ, ದೇವರು ಬಾಯ್ದೆರೆದು ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ! |
13118 | JOB 11:6 | ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ! |
13136 | JOB 12:4 | ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ. |
13162 | JOB 13:5 | ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು. |
13192 | JOB 14:7 | ಕಡಿದ ಮರವೂ, ತಾನು ಮೊಳೆಯುವುದನ್ನು ನಿಲ್ಲಿಸದೆ, ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ! |
13198 | JOB 14:13 | ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! |
13201 | JOB 14:16 | ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ! |
13220 | JOB 15:13 | ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ! |
13221 | JOB 15:14 | ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ? |
13223 | JOB 15:16 | ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ! |
13260 | JOB 16:18 | ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ! |
13322 | JOB 19:21 | ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ. |
13324 | JOB 19:23 | ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು! |
13325 | JOB 19:24 | ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ! |
13375 | JOB 21:16 | ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! |
13393 | JOB 21:34 | ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.” |
13405 | JOB 22:12 | ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು! |
13411 | JOB 22:18 | ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! |
13426 | JOB 23:3 | ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು. |
13471 | JOB 25:6 | ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!” |
13473 | JOB 26:2 | “ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು. |
13474 | JOB 26:3 | ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ! |
13487 | JOB 27:2 | “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)! |
13492 | JOB 27:7 | ನನ್ನ ಹಗೆಗೆ ದುಷ್ಟನ ಗತಿಯಾಗಲಿ, ನನ್ನ ವಿರುದ್ಧವಾಗಿ ಎದ್ದವನು ಅ ನೀತಿವಂತನ ಗತಿಯನ್ನು ಕಾಣಲಿ! |
13526 | JOB 28:18 | ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ! |
13538 | JOB 29:2 | “ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ! |
13598 | JOB 31:6 | ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ! |
13600 | JOB 31:8 | ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ! |
13602 | JOB 31:10 | ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗಮಿಸಲಿ! |
13627 | JOB 31:35 | ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು ನೋಡಿರಿ, ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ! |
13689 | JOB 34:2 | “ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ! |
13697 | JOB 34:10 | ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ! |
13703 | JOB 34:16 | ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು! |
13723 | JOB 34:36 | ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ. |
13729 | JOB 35:5 | ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ! |
13758 | JOB 36:18 | ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ! |
13775 | JOB 37:2 | ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ! |
13787 | JOB 37:14 | ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು. |
13818 | JOB 38:21 | ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! |
13855 | JOB 39:17 | ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ! |
13863 | JOB 39:25 | ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು. |
13875 | JOB 40:7 | “ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು. |
13900 | JOB 40:32 | ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ. |
13901 | JOB 41:1 | ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು. |
14265 | PSA 24:7 | ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. |
14267 | PSA 24:9 | ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. |
14334 | PSA 29:9 | ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ. |
14569 | PSA 41:3 | ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ! |
14615 | PSA 44:18 | ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ! |
14811 | PSA 57:2 | ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. |