276 | GEN 11:9 | ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು. |
339 | GEN 14:2 | ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು. |
413 | GEN 17:15 | ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು. |
495 | GEN 19:37 | ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು. |
496 | GEN 19:38 | ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು. |
908 | GEN 31:34 | ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ. |
1391 | GEN 46:4 | ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು. |
2104 | EXO 21:26 | ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು. |
2255 | EXO 26:19 | ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು. |
2296 | EXO 28:2 | ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು. |
2386 | EXO 30:3 | ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು. |
2816 | LEV 4:20 | ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು. |
4986 | DEU 3:9 | (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.) |
4988 | DEU 3:11 | (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.) |
4991 | DEU 3:14 | (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.) |
4992 | DEU 3:15 | ನಾನು ಗಿಲ್ಯಾದ್ ದೇಶವನ್ನು ಮಾಕೀರನಿಗೂ ಗಿಲ್ಯಾದ್ ಮೊದಲುಗೊಂಡು (ದಕ್ಷಿಣದ) ಅರ್ನೋನ್ ತಗ್ಗಿನ ವರೆಗೂ, |
4993 | DEU 3:16 | (ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ. |
4994 | DEU 3:17 | ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ. |
5194 | DEU 10:6 | (ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು. |
5297 | DEU 14:5 | ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ. |
5347 | DEU 16:3 | ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು. |
5389 | DEU 18:3 | ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು. |
5828 | DEU 33:16 | ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ. |
5829 | DEU 33:17 | ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು. |
5832 | DEU 33:20 | ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ. |
5835 | DEU 33:23 | ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು. |
5847 | DEU 34:6 | ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು. |
6130 | JOS 11:21 | ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು. |
6201 | JOS 14:12 | ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು. |
6204 | JOS 14:15 | ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು. |
6223 | JOS 15:19 | ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು. |
6394 | JOS 21:11 | ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು. |
6598 | JDG 3:28 | ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ. |
6612 | JDG 4:11 | (ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು. |
6715 | JDG 7:19 | ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು. |
6877 | JDG 12:6 | ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು. |
6924 | JDG 14:13 | ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು. |
6968 | JDG 16:17 | ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು. |
7123 | JDG 21:19 | ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.) |
7149 | RUT 1:20 | ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ. |
7256 | 1SA 2:14 | ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು. |
7402 | 1SA 9:9 | (ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.) |
7625 | 1SA 17:5 | ಅವನ ಶಿರಸ್ತ್ರಾಣವು ತಾಮ್ರದ್ದು. ತಾಮ್ರ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು (ಐದು ಸಾವಿರ ಶೆಕೆಲಿನ ತಾಮ್ರದ ನಾಣ್ಯಗಳಷ್ಟು ತೂಕವಾಗಿತ್ತು.) |
8113 | 2SA 3:29 | ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು. |
8165 | 2SA 6:5 | ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು. |
8240 | 2SA 9:10 | ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು. |
8490 | 2SA 18:9 | ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು. |
8599 | 2SA 21:16 | ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು. |
9656 | 2KI 5:5 | ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ, |
10211 | 2KI 24:5 | ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. |
10275 | 1CH 1:19 | ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್. |
10411 | 1CH 4:22 | ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.) |
11226 | 2CH 2:9 | ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು. |
11249 | 2CH 3:15 | ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು. |
11765 | 2CH 27:5 | ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು. |
11850 | 2CH 30:18 | ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು. |
12033 | EZR 2:1 | ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ. |
12093 | EZR 2:61 | ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) |
12879 | JOB 1:6 | ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು. |
12916 | JOB 3:8 | ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ. |
12954 | JOB 4:20 | ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ. |
12963 | JOB 5:8 | (ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು. |
13003 | JOB 6:21 | ಈಗ ನೀವು ಹಾಗೆಯೇ ಇದ್ದೀರಿ. (ನನ್ನ) ವಿಪತ್ತನ್ನು ಕಂಡ ಕೂಡಲೆ ಹೆದರಿದಿರಿ. |
13017 | JOB 7:5 | ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ. |
13050 | JOB 8:17 | (ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು. |
13120 | JOB 11:8 | ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು? |
13249 | JOB 16:7 | ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ; (ದೇವಾ) ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದಿ. |
13321 | JOB 19:20 | ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ. |
13458 | JOB 24:18 | (ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು. |
13461 | JOB 24:21 | ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ). |
13487 | JOB 27:2 | “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)! |
16851 | PRO 14:9 | ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು. |
18028 | ISA 14:30 | ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು. |
18106 | ISA 21:1 | ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ |
18130 | ISA 22:8 | ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ. |
18344 | ISA 32:15 | ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು. |
18506 | ISA 40:16 | (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು. |
18510 | ISA 40:20 | (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು. |
18608 | ISA 44:5 | (ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.” |
18674 | ISA 47:5 | ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ. |
19187 | JER 6:29 | ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ. |
19238 | JER 8:16 | ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು. |
20340 | JER 51:59 | ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.) |
20572 | EZK 3:1 | ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು. |
20608 | EZK 4:10 | ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು. |
20993 | EZK 20:29 | ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು). |
21318 | EZK 32:1 | (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, “ನರಪುತ್ರನೇ, ನೀನು ಐಗುಪ್ತದ |
21334 | EZK 32:17 | (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, |
21400 | EZK 34:18 | (ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ? |
21403 | EZK 34:21 | ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ. |
21551 | EZK 40:5 | ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು. |
21654 | EZK 43:13 | “ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ. |
21710 | EZK 45:11 | ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು. |
21713 | EZK 45:14 | ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್) |
21749 | EZK 47:1 | ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು. |
21768 | EZK 47:20 | ಇದು ಪಶ್ಚಿಮದ ಮೇರೆಯಾಗಿದೆ. ಹಮಾತಿನ ದಾರಿಗೆ ಎದುರಿನ (ಕರಾವಳಿಯ) ತನಕ ಮಹಾ ಸಮುದ್ರದವರೆಗೂ ಪಶ್ಚಿಮದ ಮೇರೆಯಾಗಿರುವುದು. |
21793 | EZK 48:22 | ಅರಸನ ಪಾಲಿನ ಎರಡು ಭಾಗಗಳ ಮಧ್ಯದಲ್ಲಿ ಲೇವಿಯರ ಪಾಲಿನ (ಬಡಗಣ) ಮೇರೆಯಿಂದ ಪಟ್ಟಣಕ್ಕೆ ಒಳಪಟ್ಟ ಭೂಮಿಯ (ತೆಂಕಣ) ಮೇರೆಯ ತನಕ ಅಂದರೆ ಯೆಹೂದದ (ತೆಂಕಣ) ಮೇರೆಯಿಂದ ಬೆನ್ಯಾಮೀನಿನ (ಬಡಗಣ) ಮೇರೆಯವರೆಗೆ ಅರಸನ ಪಾಲು ಹರಡಿರುವುದು. |
21799 | EZK 48:28 | ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು. |
21866 | DAN 2:39 | “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು. |
22272 | HOS 8:9 | ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ. |