Wildebeest analysis examples for:   kan-kan2017   ,    February 25, 2023 at 00:28    Script wb_pprint_html.py   by Ulf Hermjakob

1  GEN 1:1  ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
5  GEN 1:5  ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
9  GEN 1:9  ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
11  GEN 1:11  ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
14  GEN 1:14  ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
18  GEN 1:18  ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
20  GEN 1:20  ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
22  GEN 1:22  ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
24  GEN 1:24  ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
25  GEN 1:25  ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
26  GEN 1:26  ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
28  GEN 1:28  ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30  GEN 1:30  ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
40  GEN 2:9  ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
42  GEN 2:11  ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
43  GEN 2:12  ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
44  GEN 2:13  ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
47  GEN 2:16  ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
49  GEN 2:18  ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
51  GEN 2:20  ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
53  GEN 2:22  ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
54  GEN 2:23  “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
58  GEN 3:2  ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
60  GEN 3:4  ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
61  GEN 3:5  ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
65  GEN 3:9  ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
66  GEN 3:10  ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
67  GEN 3:11  ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
68  GEN 3:12  ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
69  GEN 3:13  ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
71  GEN 3:15  ನಿನಗೂ, ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
72  GEN 3:16  ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
73  GEN 3:17  ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
74  GEN 3:18  ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
80  GEN 3:24  ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
81  GEN 4:1  ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
84  GEN 4:4  ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
85  GEN 4:5  ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
86  GEN 4:6  ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ?
87  GEN 4:7  ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
89  GEN 4:9  ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
90  GEN 4:10  ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
91  GEN 4:11  ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.
92  GEN 4:12  ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
93  GEN 4:13  ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.
94  GEN 4:14  ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
95  GEN 4:15  ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
99  GEN 4:19  ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.
103  GEN 4:23  ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
104  GEN 4:24  ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
105  GEN 4:25  ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.
106  GEN 4:26  ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
108  GEN 5:2  ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
109  GEN 5:3  ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
110  GEN 5:4  ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.
112  GEN 5:6  ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.
113  GEN 5:7  ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
115  GEN 5:9  ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
118  GEN 5:12  ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು.
135  GEN 5:29  ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
138  GEN 5:32  ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.
141  GEN 6:3  ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
143  GEN 6:5  ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
144  GEN 6:6  ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
145  GEN 6:7  ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
148  GEN 6:10  ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
151  GEN 6:13  ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
153  GEN 6:15  ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
156  GEN 6:18  “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.
157  GEN 6:19  ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
158  GEN 6:20  ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
161  GEN 7:1  ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
164  GEN 7:4  ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
167  GEN 7:7  ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.
168  GEN 7:8  ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ
173  GEN 7:13  ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.
174  GEN 7:14  ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ
180  GEN 7:20  ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,
181  GEN 7:21  ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.
183  GEN 7:23  ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
195  GEN 8:11  ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
197  GEN 8:13  ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
199  GEN 8:15  ಆಗ ದೇವರು ನೋಹನಿಗೆ,
200  GEN 8:16  “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
201  GEN 8:17  ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
203  GEN 8:19  ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.
204  GEN 8:20  ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
205  GEN 8:21  ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
206  GEN 8:22  ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.
207  GEN 9:1  ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
208  GEN 9:2  ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
211  GEN 9:5  ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
214  GEN 9:8  ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,
215  GEN 9:9  “ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.
216  GEN 9:10  ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.