1 | GEN 1:1 | ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. |
2 | GEN 1:2 | ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. |
3 | GEN 1:3 | ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. |
4 | GEN 1:4 | ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. |
5 | GEN 1:5 | ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. |
6 | GEN 1:6 | ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. |
7 | GEN 1:7 | ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. |
8 | GEN 1:8 | ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. |
9 | GEN 1:9 | ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. |
10 | GEN 1:10 | ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. |
11 | GEN 1:11 | ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. |
12 | GEN 1:12 | ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು |
13 | GEN 1:13 | ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. |
14 | GEN 1:14 | ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. |
15 | GEN 1:15 | ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. |
16 | GEN 1:16 | ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. |
18 | GEN 1:18 | ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು. |
19 | GEN 1:19 | ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು. |
20 | GEN 1:20 | ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. |
21 | GEN 1:21 | ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
23 | GEN 1:23 | ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. |
24 | GEN 1:24 | ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. |
25 | GEN 1:25 | ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
26 | GEN 1:26 | ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. |
27 | GEN 1:27 | ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” |
28 | GEN 1:28 | ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. |
30 | GEN 1:30 | ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. |
31 | GEN 1:31 | ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು. |
32 | GEN 2:1 | ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. |
33 | GEN 2:2 | ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. |
34 | GEN 2:3 | ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. |
35 | GEN 2:4 | ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ. |
36 | GEN 2:5 | ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. |
37 | GEN 2:6 | ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು. |
38 | GEN 2:7 | ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು. |
39 | GEN 2:8 | ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. |
40 | GEN 2:9 | ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. |
41 | GEN 2:10 | ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. |
42 | GEN 2:11 | ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. |
43 | GEN 2:12 | ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ. |
44 | GEN 2:13 | ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. |
45 | GEN 2:14 | ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ. |
46 | GEN 2:15 | ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು. |
47 | GEN 2:16 | ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. |
48 | GEN 2:17 | ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. |
49 | GEN 2:18 | ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. |
50 | GEN 2:19 | ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. |
51 | GEN 2:20 | ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ. |
52 | GEN 2:21 | ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. |
53 | GEN 2:22 | ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ, |
54 | GEN 2:23 | “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. |
55 | GEN 2:24 | ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. |
56 | GEN 2:25 | ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ. |
57 | GEN 3:1 | ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. |
59 | GEN 3:3 | ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. |
60 | GEN 3:4 | ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ. |
61 | GEN 3:5 | ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು. |
62 | GEN 3:6 | ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. |
63 | GEN 3:7 | ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು. |
64 | GEN 3:8 | ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು. |
65 | GEN 3:9 | ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು. |
66 | GEN 3:10 | ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. |
67 | GEN 3:11 | ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. |
68 | GEN 3:12 | ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು. |
69 | GEN 3:13 | ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. |
70 | GEN 3:14 | ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. |
71 | GEN 3:15 | ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು. |
72 | GEN 3:16 | ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. |
73 | GEN 3:17 | ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. |
74 | GEN 3:18 | ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು. |
75 | GEN 3:19 | ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು. |
76 | GEN 3:20 | ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ. |
77 | GEN 3:21 | ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
79 | GEN 3:23 | ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು. |
80 | GEN 3:24 | ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು. |
81 | GEN 4:1 | ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು. |
82 | GEN 4:2 | ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು. |
83 | GEN 4:3 | ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು. |
84 | GEN 4:4 | ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು. |
85 | GEN 4:5 | ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು. |
87 | GEN 4:7 | ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. |
88 | GEN 4:8 | ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. |
89 | GEN 4:9 | ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು. |
90 | GEN 4:10 | ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. |
91 | GEN 4:11 | ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು. |
92 | GEN 4:12 | ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು. |
93 | GEN 4:13 | ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ. |
94 | GEN 4:14 | ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. |
95 | GEN 4:15 | ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು. |
96 | GEN 4:16 | ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು. |
97 | GEN 4:17 | ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು. |
98 | GEN 4:18 | ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು. |
99 | GEN 4:19 | ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು. |
100 | GEN 4:20 | ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ. |
101 | GEN 4:21 | ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು. |
102 | GEN 4:22 | ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ. |
103 | GEN 4:23 | ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು. |
104 | GEN 4:24 | ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು. |