Wildebeest analysis examples for:   kan-kan2017   :    February 25, 2023 at 00:28    Script wb_pprint_html.py   by Ulf Hermjakob

107  GEN 5:1  ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
147  GEN 6:9  ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
236  GEN 10:1  ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.
277  GEN 11:10  ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.
294  GEN 11:27  ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.
395  GEN 16:13  ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
569  GEN 22:21  ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.
672  GEN 25:13  ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
1035  GEN 35:23  ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.
1036  GEN 35:24  ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.
1037  GEN 35:25  ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.
1038  GEN 35:26  ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
1042  GEN 36:1  ಎದೋಮ್ ಎಂಬ ಏಸಾವನ ವಂಶಾವಳಿ ಇದು:
1050  GEN 36:9  ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:
1051  GEN 36:10  ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
1052  GEN 36:11  ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,
1054  GEN 36:13  ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.
1055  GEN 36:14  ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.
1056  GEN 36:15  ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
1058  GEN 36:17  ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
1059  GEN 36:18  ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
1061  GEN 36:20  ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
1063  GEN 36:22  ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.
1064  GEN 36:23  ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.
1065  GEN 36:24  ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.
1066  GEN 36:25  ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
1067  GEN 36:26  ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.
1068  GEN 36:27  ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.
1069  GEN 36:28  ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.
1070  GEN 36:29  ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ
1072  GEN 36:31  ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:
1081  GEN 36:40  ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
1086  GEN 37:2  ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.
1395  GEN 46:8  ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.
1396  GEN 46:9  ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ.
1397  GEN 46:10  ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.
1398  GEN 46:11  ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.
1399  GEN 46:12  ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.
1400  GEN 46:13  ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.
1401  GEN 46:14  ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್
1403  GEN 46:16  ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;
1404  GEN 46:17  ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲ್ಕೀಯೇಲ್.
1408  GEN 46:21  ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.
1410  GEN 46:23  ದಾನನ ಮಗನು: ಹುಶೀಮ್.
1411  GEN 46:24  ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.
1534  EXO 1:1  ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
1670  EXO 6:14  ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.
1672  EXO 6:16  ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.
1673  EXO 6:17  ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.
1674  EXO 6:18  ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.
1675  EXO 6:19  ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.
1678  EXO 6:22  ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.
1680  EXO 6:24  ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.
1712  EXO 7:26  ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
1828  EXO 12:11  ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.
1922  EXO 15:1  ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.
1942  EXO 15:21  ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”
1964  EXO 16:16  ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು.
2053  EXO 20:1  ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
2434  EXO 31:13  “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.
2536  EXO 35:4  ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ,
2655  EXO 38:21  ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.
2859  LEV 6:2  “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
2864  LEV 6:7  “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.
2875  LEV 6:18  “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
2881  LEV 7:1  “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.
3610  NUM 1:5  ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
3615  NUM 1:10  ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
3695  NUM 3:2  ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.
3710  NUM 3:17  ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.
3711  NUM 3:18  ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ.
3712  NUM 3:19  ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.
3713  NUM 3:20  ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.
3718  NUM 3:25  ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,
3724  NUM 3:31  ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.
3729  NUM 3:36  ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,
3775  NUM 4:31  ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,
3799  NUM 5:6  “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,
3805  NUM 5:12  “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,
3826  NUM 6:2  “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
3838  NUM 6:14  ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದಟಗರನ್ನು ಹಾಗು ತರಬೇಕು.
3864  NUM 7:13  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3870  NUM 7:19  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3876  NUM 7:25  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;
3882  NUM 7:31  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3888  NUM 7:37  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3894  NUM 7:43  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3900  NUM 7:49  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3906  NUM 7:55  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3912  NUM 7:61  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3918  NUM 7:67  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3924  NUM 7:73  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3930  NUM 7:79  ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
3938  NUM 7:87  ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು.
3939  NUM 7:88  ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.
3941  NUM 8:1  ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ:
3947  NUM 8:7  ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
3964  NUM 8:24  “ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.
4080  NUM 13:4  ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,
4104  NUM 13:28  ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.