Wildebeest analysis examples for:   kan-kan2017   ;    February 25, 2023 at 00:28    Script wb_pprint_html.py   by Ulf Hermjakob

24  GEN 1:24  ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
27  GEN 1:27  ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
45  GEN 2:14  ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
70  GEN 3:14  ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
75  GEN 3:19  ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
94  GEN 4:14  ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
98  GEN 4:18  ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.
100  GEN 4:20  ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
101  GEN 4:21  ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
103  GEN 4:23  ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
141  GEN 6:3  ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
145  GEN 6:7  ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
147  GEN 6:9  ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
151  GEN 6:13  ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
152  GEN 6:14  ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
154  GEN 6:16  ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
155  GEN 6:17  ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
161  GEN 7:1  ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
171  GEN 7:11  ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
183  GEN 7:23  ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
200  GEN 8:16  “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
201  GEN 8:17  ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
207  GEN 9:1  ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
213  GEN 9:7  ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.
217  GEN 9:11  ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
226  GEN 9:20  ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.
232  GEN 9:26  ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.
250  GEN 10:15  ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.
260  GEN 10:25  ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.
268  GEN 11:1  ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.
271  GEN 11:4  ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
273  GEN 11:6  ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
296  GEN 11:29  ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
302  GEN 12:3  ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.
310  GEN 12:11  ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;
312  GEN 12:13  ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.
318  GEN 12:19  ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,
321  GEN 13:2  ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.
327  GEN 13:8  ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
328  GEN 13:9  ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.
336  GEN 13:17  ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
347  GEN 14:10  ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
350  GEN 14:13  ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
356  GEN 14:19  ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
358  GEN 14:21  ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.
365  GEN 15:4  ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,
367  GEN 15:6  ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.
371  GEN 15:10  ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.
373  GEN 15:12  ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.
384  GEN 16:2  ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
387  GEN 16:5  ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.
388  GEN 16:6  ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.
392  GEN 16:10  ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.
393  GEN 16:11  ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
394  GEN 16:12  ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.
399  GEN 17:1  ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
400  GEN 17:2  ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು.
402  GEN 17:4  “ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,
410  GEN 17:12  ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;
417  GEN 17:19  ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
418  GEN 17:20  ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
419  GEN 17:21  ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.
428  GEN 18:3  “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
429  GEN 18:4  ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
435  GEN 18:10  ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
436  GEN 18:11  ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.
443  GEN 18:18  ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;
444  GEN 18:19  ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
445  GEN 18:20  ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
447  GEN 18:22  ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.
449  GEN 18:24  ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
450  GEN 18:25  ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
452  GEN 18:27  ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
455  GEN 18:30  ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
456  GEN 18:31  ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
457  GEN 18:32  ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
458  GEN 18:33  ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
460  GEN 19:2  “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
463  GEN 19:5  ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.
466  GEN 19:8  ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.
467  GEN 19:9  ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
473  GEN 19:15  ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.
475  GEN 19:17  ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
476  GEN 19:18  ಅದಕ್ಕೆ ಲೋಟನು, “ಕರ್ತನೇ, ಅದು ನನ್ನಿಂದಾಗದು;
477  GEN 19:19  ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
478  GEN 19:20  ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.
479  GEN 19:21  ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
480  GEN 19:22  ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
489  GEN 19:31  ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;
491  GEN 19:33  ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
492  GEN 19:34  ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
493  GEN 19:35  ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
499  GEN 20:3  ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
502  GEN 20:6  ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
508  GEN 20:12  ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು.
511  GEN 20:15  “ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು.
512  GEN 20:16  ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.
520  GEN 21:6  ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.
524  GEN 21:10  ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.
526  GEN 21:12  ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;