3 | GEN 1:3 | ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. |
5 | GEN 1:5 | ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. |
6 | GEN 1:6 | ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. |
8 | GEN 1:8 | ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. |
9 | GEN 1:9 | ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. |
10 | GEN 1:10 | ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. |
11 | GEN 1:11 | ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. |
14 | GEN 1:14 | ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. |
20 | GEN 1:20 | ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. |
22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
24 | GEN 1:24 | ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. |
27 | GEN 1:27 | ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” |
28 | GEN 1:28 | ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. |
29 | GEN 1:29 | ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ |
47 | GEN 2:16 | ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. |
49 | GEN 2:18 | ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. |
54 | GEN 2:23 | “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. |
57 | GEN 3:1 | ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. |
58 | GEN 3:2 | ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು, |
60 | GEN 3:4 | ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ. |
65 | GEN 3:9 | ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು. |
66 | GEN 3:10 | ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. |
67 | GEN 3:11 | ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. |
68 | GEN 3:12 | ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು. |
69 | GEN 3:13 | ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. |
70 | GEN 3:14 | ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. |
72 | GEN 3:16 | ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. |
73 | GEN 3:17 | ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
81 | GEN 4:1 | ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು. |
86 | GEN 4:6 | ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? |
89 | GEN 4:9 | ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು. |
90 | GEN 4:10 | ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. |
93 | GEN 4:13 | ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ. |
95 | GEN 4:15 | ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು. |
103 | GEN 4:23 | ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು. |
105 | GEN 4:25 | ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು. |
106 | GEN 4:26 | ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು. |
108 | GEN 5:2 | ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. |
135 | GEN 5:29 | ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು. |
141 | GEN 6:3 | ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು. |
145 | GEN 6:7 | ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. |
151 | GEN 6:13 | ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ. |
156 | GEN 6:18 | “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು. |
161 | GEN 7:1 | ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ. |
200 | GEN 8:16 | “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ; |
205 | GEN 8:21 | ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. |
207 | GEN 9:1 | ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. |
215 | GEN 9:9 | “ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು. |
218 | GEN 9:12 | ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. |
223 | GEN 9:17 | ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು. |
231 | GEN 9:25 | “ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು. |
232 | GEN 9:26 | ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ. |
244 | GEN 10:9 | ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು. |
270 | GEN 11:3 | “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. |
271 | GEN 11:4 | ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. |
273 | GEN 11:6 | ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. |
300 | GEN 12:1 | ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು. |
306 | GEN 12:7 | ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. |
310 | GEN 12:11 | ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; |
317 | GEN 12:18 | ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? |
327 | GEN 13:8 | ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ. |
333 | GEN 13:14 | ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು. |
356 | GEN 14:19 | ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ; |
358 | GEN 14:21 | ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು. |
360 | GEN 14:23 | “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’ |
362 | GEN 15:1 | ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.” |
363 | GEN 15:2 | ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು. |
364 | GEN 15:3 | ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. |
365 | GEN 15:4 | ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು, |
366 | GEN 15:5 | “ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು. |
368 | GEN 15:7 | ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. |
369 | GEN 15:8 | “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು. |
370 | GEN 15:9 | ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು. |
374 | GEN 15:13 | ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು. |
379 | GEN 15:18 | ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ. |
384 | GEN 16:2 | ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು. |
387 | GEN 16:5 | ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು. |
388 | GEN 16:6 | ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. |
390 | GEN 16:8 | “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. |
391 | GEN 16:9 | ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು. |
392 | GEN 16:10 | ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು. |
393 | GEN 16:11 | ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು. |
395 | GEN 16:13 | ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು. |
396 | GEN 16:14 | ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. |
399 | GEN 17:1 | ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ. |
402 | GEN 17:4 | “ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ, |
407 | GEN 17:9 | ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು. |
413 | GEN 17:15 | ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು. |
415 | GEN 17:17 | ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು. |
416 | GEN 17:18 | ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು. |
417 | GEN 17:19 | ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. |
428 | GEN 18:3 | “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ. |
430 | GEN 18:5 | ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು. |
431 | GEN 18:6 | ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. |
434 | GEN 18:9 | ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು. |
435 | GEN 18:10 | ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. |
437 | GEN 18:12 | ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. |
438 | GEN 18:13 | ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು? |
440 | GEN 18:15 | ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು. |