3 | GEN 1:3 | ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. |
5 | GEN 1:5 | ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. |
6 | GEN 1:6 | ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. |
8 | GEN 1:8 | ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. |
9 | GEN 1:9 | ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. |
10 | GEN 1:10 | ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. |
11 | GEN 1:11 | ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. |
15 | GEN 1:15 | ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. |
20 | GEN 1:20 | ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. |
22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
24 | GEN 1:24 | ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. |
27 | GEN 1:27 | ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” |
28 | GEN 1:28 | ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. |
30 | GEN 1:30 | ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. |
48 | GEN 2:17 | ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. |
49 | GEN 2:18 | ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. |
54 | GEN 2:23 | “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. |
57 | GEN 3:1 | ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. |
59 | GEN 3:3 | ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. |
61 | GEN 3:5 | ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು. |
65 | GEN 3:9 | ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು. |
66 | GEN 3:10 | ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. |
67 | GEN 3:11 | ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. |
68 | GEN 3:12 | ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು. |
69 | GEN 3:13 | ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. |
71 | GEN 3:15 | ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು. |
72 | GEN 3:16 | ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. |
75 | GEN 3:19 | ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
81 | GEN 4:1 | ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು. |
87 | GEN 4:7 | ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. |
89 | GEN 4:9 | ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು. |
92 | GEN 4:12 | ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು. |
94 | GEN 4:14 | ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. |
95 | GEN 4:15 | ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು. |
104 | GEN 4:24 | ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು. |
105 | GEN 4:25 | ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು. |
106 | GEN 4:26 | ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು. |
108 | GEN 5:2 | ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. |
135 | GEN 5:29 | ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು. |
141 | GEN 6:3 | ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು. |
145 | GEN 6:7 | ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. |
159 | GEN 6:21 | ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು. |
164 | GEN 7:4 | ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. |
201 | GEN 8:17 | ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. |
206 | GEN 8:22 | ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು. |
213 | GEN 9:7 | ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. |
217 | GEN 9:11 | ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. |
222 | GEN 9:16 | ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು. |
223 | GEN 9:17 | ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು. |
231 | GEN 9:25 | “ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು. |
233 | GEN 9:27 | ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು. |
244 | GEN 10:9 | ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು. |
270 | GEN 11:3 | “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. |
271 | GEN 11:4 | ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. |
274 | GEN 11:7 | ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು. |
302 | GEN 12:3 | ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು. |
306 | GEN 12:7 | ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. |
312 | GEN 12:13 | ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು. |
318 | GEN 12:19 | ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ, |
328 | GEN 13:9 | ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು. |
336 | GEN 13:17 | ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು. |
357 | GEN 14:20 | ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು. |
358 | GEN 14:21 | ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು. |
361 | GEN 14:24 | ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು. |
362 | GEN 15:1 | ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.” |
363 | GEN 15:2 | ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು. |
364 | GEN 15:3 | ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. |
365 | GEN 15:4 | ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು, |
366 | GEN 15:5 | “ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು. |
368 | GEN 15:7 | ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. |
369 | GEN 15:8 | “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು. |
370 | GEN 15:9 | ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು. |
377 | GEN 15:16 | ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು. |
382 | GEN 15:21 | ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು. |
384 | GEN 16:2 | ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು. |
387 | GEN 16:5 | ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು. |
388 | GEN 16:6 | ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. |
390 | GEN 16:8 | “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. |
391 | GEN 16:9 | ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು. |
392 | GEN 16:10 | ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು. |
394 | GEN 16:12 | ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು. |
395 | GEN 16:13 | ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು. |
396 | GEN 16:14 | ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. |
400 | GEN 17:2 | ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು. |
406 | GEN 17:8 | ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು. |
412 | GEN 17:14 | ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು. |
414 | GEN 17:16 | ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು. |
415 | GEN 17:17 | ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು. |
416 | GEN 17:18 | ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು. |
419 | GEN 17:21 | ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು. |
430 | GEN 18:5 | ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು. |
431 | GEN 18:6 | ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. |
434 | GEN 18:9 | ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು. |
435 | GEN 18:10 | ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. |
437 | GEN 18:12 | ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. |
439 | GEN 18:14 | ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು. |
440 | GEN 18:15 | ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು. |
444 | GEN 18:19 | ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು. |
446 | GEN 18:21 | ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು. |