75 | GEN 3:19 | ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು. |
145 | GEN 6:7 | ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. |
218 | GEN 9:12 | ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. |
364 | GEN 15:3 | ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. |
525 | GEN 21:11 | ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. |
580 | GEN 23:8 | ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ, |
659 | GEN 24:67 | ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು. |
762 | GEN 27:34 | ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು, |
769 | GEN 27:41 | ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು. |
789 | GEN 28:15 | ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. |
803 | GEN 29:7 | ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು, |
850 | GEN 30:19 | ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು. |
862 | GEN 30:31 | ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು” |
1021 | GEN 35:9 | ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು. |
1118 | GEN 37:34 | ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು. |
1119 | GEN 37:35 | ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. |
1125 | GEN 38:5 | ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ “ಶೇಲಹ” ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು. |
1132 | GEN 38:12 | ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು. |
1146 | GEN 38:26 | ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ. |
1186 | GEN 40:13 | ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ. |
1194 | GEN 40:21 | ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು. |
1209 | GEN 41:13 | ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು. |
1291 | GEN 42:38 | ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. |
1293 | GEN 43:2 | ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು. |
1338 | GEN 44:13 | ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು. |
1350 | GEN 44:25 | “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ, |
1354 | GEN 44:29 | ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. |
1356 | GEN 44:31 | ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು. |
1359 | GEN 44:34 | ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು. |
1360 | GEN 45:1 | ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ. |
1364 | GEN 45:5 | ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. |
1371 | GEN 45:12 | “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ. |
1391 | GEN 46:4 | ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು. |
1430 | GEN 47:9 | ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು. |
1431 | GEN 47:10 | ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು. |
1473 | GEN 48:21 | ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು. |
1587 | EXO 3:7 | ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು. |
1595 | EXO 3:15 | ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ. |
1658 | EXO 6:2 | ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು, |
1661 | EXO 6:5 | ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು. |
1716 | EXO 8:1 | ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು” ಎಂದು ಹೇಳಬೇಕು ಎಂದನು. |
1807 | EXO 10:29 | ಅದಕ್ಕೆ ಮೋಶೆಯು, “ನೀನು ಸರಿಯಾಗಿ ಹೇಳಿದೆ. ಇನ್ನು ಮೇಲೆ ನಾನು ನಿನ್ನ ಮುಖವನ್ನು ಪುನಃ ನೋಡುವುದಿಲ್ಲ” ಎಂದನು. |
2198 | EXO 25:2 | “ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು. |
2405 | EXO 30:22 | ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ, |
2478 | EXO 33:4 | ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. |
2532 | EXO 34:35 | ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು. |
2561 | EXO 35:29 | ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು. |
2570 | EXO 36:3 | ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು. |
2869 | LEV 6:12 | ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ, |
2874 | LEV 6:17 | ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ, |
2984 | LEV 10:6 | ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ. |
3059 | LEV 13:6 | ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. |
3060 | LEV 13:7 | ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು. |
3069 | LEV 13:16 | ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು. |
3087 | LEV 13:34 | ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. |
3155 | LEV 14:43 | “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು. |
3310 | LEV 19:28 | “‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು. |
3356 | LEV 21:10 | “‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು. |
3498 | LEV 25:28 | ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು. |
3595 | LEV 27:24 | ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು. |
3737 | NUM 3:44 | ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ, |
3963 | NUM 8:23 | ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, |
4029 | NUM 11:4 | ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು? |
4133 | NUM 14:24 | ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು. |
4148 | NUM 14:39 | ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು. |
4184 | NUM 15:30 | ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು. |
4203 | NUM 16:8 | ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ, |
4368 | NUM 21:27 | ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು. |
4401 | NUM 22:25 | ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು. |
4602 | NUM 28:23 | ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. |
4930 | DEU 1:36 | ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು. |
5080 | DEU 5:25 | ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು. |
5290 | DEU 13:17 | ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು. |
5517 | DEU 23:16 | ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು. |
5531 | DEU 24:4 | ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು. |
5547 | DEU 24:20 | ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. |
5582 | DEU 26:14 | ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ. |
5713 | DEU 30:3 | ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು. |
5718 | DEU 30:8 | ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ. |
5757 | DEU 31:27 | ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ. |
5823 | DEU 33:11 | ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು. |
5849 | DEU 34:8 | ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು. |
5938 | JOS 5:2 | ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು |
6046 | JOS 9:7 | ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು. |
6389 | JOS 21:6 | ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು. |
6446 | JOS 22:18 | ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು. |
6551 | JDG 2:4 | ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. |
6566 | JDG 2:19 | ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ. |
6582 | JDG 3:12 | ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು. |
6602 | JDG 4:1 | ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು. |
6620 | JDG 4:19 | ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು. |
6749 | JDG 8:28 | ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು. |
6819 | JDG 10:6 | ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು. |
6826 | JDG 10:13 | ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ. |
6870 | JDG 11:39 | ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು. |
6895 | JDG 13:9 | ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ. |
6950 | JDG 15:19 | ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ. |