48 | GEN 2:17 | ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. |
54 | GEN 2:23 | “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. |
55 | GEN 2:24 | ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. |
68 | GEN 3:12 | ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು. |
70 | GEN 3:14 | ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. |
71 | GEN 3:15 | ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
91 | GEN 4:11 | ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು. |
94 | GEN 4:14 | ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. |
98 | GEN 4:18 | ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು. |
135 | GEN 5:29 | ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು. |
161 | GEN 7:1 | ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ. |
176 | GEN 7:16 | ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು. |
205 | GEN 8:21 | ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. |
218 | GEN 9:12 | ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. |
225 | GEN 9:19 | ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು. |
253 | GEN 10:18 | ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು. |
264 | GEN 10:29 | ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು. |
296 | GEN 11:29 | ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ. |
306 | GEN 12:7 | ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. |
311 | GEN 12:12 | ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು. |
334 | GEN 13:15 | ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. |
336 | GEN 13:17 | ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು. |
338 | GEN 14:1 | ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, |
340 | GEN 14:3 | ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು. |
341 | GEN 14:4 | ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು. |
350 | GEN 14:13 | ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು. |
362 | GEN 15:1 | ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.” |
365 | GEN 15:4 | ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು, |
368 | GEN 15:7 | ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. |
379 | GEN 15:18 | ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ. |
396 | GEN 16:14 | ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. |
463 | GEN 19:5 | ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು. |
465 | GEN 19:7 | “ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ. |
467 | GEN 19:9 | ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು. |
471 | GEN 19:13 | ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. |
472 | GEN 19:14 | ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು. |
475 | GEN 19:17 | ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು. |
479 | GEN 19:21 | ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ. |
492 | GEN 19:34 | ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು. |
501 | GEN 20:5 | ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು. |
504 | GEN 20:8 | ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು. |
506 | GEN 20:10 | “ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು. |
507 | GEN 20:11 | ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು. |
520 | GEN 21:6 | ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು. |
524 | GEN 21:10 | ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು. |
525 | GEN 21:11 | ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. |
527 | GEN 21:13 | ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು. |
537 | GEN 21:23 | ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. |
540 | GEN 21:26 | ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು. |
543 | GEN 21:29 | ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. |
544 | GEN 21:30 | ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು. |
549 | GEN 22:1 | ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು. |
560 | GEN 22:12 | ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು. |
571 | GEN 22:23 | ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು. |
576 | GEN 23:4 | “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು. |
581 | GEN 23:9 | ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು. |
595 | GEN 24:3 | ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ, |
597 | GEN 24:5 | ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು. |
599 | GEN 24:7 | ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು. |
604 | GEN 24:12 | “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ. |
605 | GEN 24:13 | ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ. |
634 | GEN 24:42 | ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ |
642 | GEN 24:50 | ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; |
650 | GEN 24:58 | ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು. |
659 | GEN 24:67 | ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು. |
689 | GEN 25:30 | ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. |
696 | GEN 26:3 | ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು, |
697 | GEN 26:4 | ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು. |
700 | GEN 26:7 | ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು. |
702 | GEN 26:9 | ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು. |
704 | GEN 26:11 | ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು. |
715 | GEN 26:22 | ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು. |
720 | GEN 26:27 | ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು, |
722 | GEN 26:29 | ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು. |
764 | GEN 27:36 | ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು, |
774 | GEN 27:46 | ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು. |
778 | GEN 28:4 | ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು. |
789 | GEN 28:15 | ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. |
790 | GEN 28:16 | ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು. |
791 | GEN 28:17 | ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು. |
794 | GEN 28:20 | ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು, |
796 | GEN 28:22 | ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು. |
816 | GEN 29:20 | ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು. |
823 | GEN 29:27 | ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. |
829 | GEN 29:33 | ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.” |
830 | GEN 29:34 | ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು. |
831 | GEN 29:35 | ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು. |
846 | GEN 30:15 | ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು. |
861 | GEN 30:30 | ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು. |