33 | GEN 2:2 | ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. |
34 | GEN 2:3 | ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. |
36 | GEN 2:5 | ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. |
39 | GEN 2:8 | ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. |
41 | GEN 2:10 | ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. |
46 | GEN 2:15 | ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು. |
50 | GEN 2:19 | ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. |
57 | GEN 3:1 | ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. |
79 | GEN 3:23 | ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು. |
80 | GEN 3:24 | ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು. |
90 | GEN 4:10 | ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. |
95 | GEN 4:15 | ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು. |
96 | GEN 4:16 | ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು. |
104 | GEN 4:24 | ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು. |
113 | GEN 5:7 | ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು. |
132 | GEN 5:26 | ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು. |
137 | GEN 5:31 | ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು. |
141 | GEN 6:3 | ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು. |
162 | GEN 7:2 | ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು. |
163 | GEN 7:3 | ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು. |
164 | GEN 7:4 | ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. |
170 | GEN 7:10 | ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು. |
188 | GEN 8:4 | ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು. |
194 | GEN 8:10 | ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು. |
196 | GEN 8:12 | ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ. |
210 | GEN 9:4 | ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ. |
257 | GEN 10:22 | ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. |
273 | GEN 11:6 | ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. |
288 | GEN 11:21 | ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು. |
317 | GEN 12:18 | ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? |
338 | GEN 14:1 | ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, |
342 | GEN 14:5 | ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು. |
346 | GEN 14:9 | ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. |
360 | GEN 14:23 | “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’ |
363 | GEN 15:2 | ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು. |
395 | GEN 16:13 | ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು. |
420 | GEN 17:22 | ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು. |
466 | GEN 19:8 | ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು. |
509 | GEN 20:13 | ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು. |
532 | GEN 21:18 | ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. |
542 | GEN 21:28 | ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು, |
543 | GEN 21:29 | ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. |
544 | GEN 21:30 | ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು. |
555 | GEN 22:7 | ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ, |
560 | GEN 22:12 | ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು. |
613 | GEN 24:21 | ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು. |
684 | GEN 25:25 | ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು. |
685 | GEN 25:26 | ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು. |
686 | GEN 25:27 | ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು. |
687 | GEN 25:28 | ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. |
688 | GEN 25:29 | ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ; |
689 | GEN 25:30 | ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. |
691 | GEN 25:32 | ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. |
692 | GEN 25:33 | ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು. |
693 | GEN 25:34 | ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು. |
698 | GEN 26:5 | ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು. |
713 | GEN 26:20 | ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು. |
727 | GEN 26:34 | ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು. |
729 | GEN 27:1 | ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು. |
733 | GEN 27:5 | ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು. |
734 | GEN 27:6 | ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ, |
739 | GEN 27:11 | ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು. |
743 | GEN 27:15 | ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು. |
746 | GEN 27:18 | ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು. |
747 | GEN 27:19 | ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು, |
748 | GEN 27:20 | ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು. |
749 | GEN 27:21 | ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು. |
750 | GEN 27:22 | ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು. |
751 | GEN 27:23 | ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು. |
752 | GEN 27:24 | ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು, |
758 | GEN 27:30 | ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು. |
760 | GEN 27:32 | ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು. |
762 | GEN 27:34 | ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು, |
764 | GEN 27:36 | ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು, |
765 | GEN 27:37 | ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು. |
766 | GEN 27:38 | ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು, |
769 | GEN 27:41 | ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು. |
770 | GEN 27:42 | ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ. |
773 | GEN 27:45 | ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು. |
779 | GEN 28:5 | ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. |
780 | GEN 28:6 | ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟದ್ದನ್ನೂ, ಏಸಾವನು ನೋಡಿದನು. |
781 | GEN 28:7 | ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು. |
782 | GEN 28:8 | ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು. |
783 | GEN 28:9 | ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು. |
786 | GEN 28:12 | ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು. |
789 | GEN 28:15 | ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. |
811 | GEN 29:15 | ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು. |
814 | GEN 29:18 | ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು, |
816 | GEN 29:20 | ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು. |
823 | GEN 29:27 | ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. |
826 | GEN 29:30 | ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು. |
859 | GEN 30:28 | ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು. |
862 | GEN 30:31 | ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು” |
897 | GEN 31:23 | ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು. |