23 | GEN 1:23 | ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. |
112 | GEN 5:6 | ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು. |
117 | GEN 5:11 | ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು. |
136 | GEN 5:30 | ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು. |
138 | GEN 5:32 | ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು. |
153 | GEN 6:15 | ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. |
235 | GEN 9:29 | ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು. |
278 | GEN 11:11 | ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರ್ಷ ಬದುಕಿದನು. |
299 | GEN 11:32 | ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು. |
309 | GEN 12:10 | ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು. |
310 | GEN 12:11 | ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; |
311 | GEN 12:12 | ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು. |
313 | GEN 12:14 | ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು. |
320 | GEN 13:1 | ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು. |
321 | GEN 13:2 | ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು. |
329 | GEN 13:10 | ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು. |
339 | GEN 14:2 | ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು. |
340 | GEN 14:3 | ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು. |
341 | GEN 14:4 | ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು. |
346 | GEN 14:9 | ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. |
360 | GEN 14:23 | “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’ |
379 | GEN 15:18 | ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ. |
383 | GEN 16:1 | ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು. |
385 | GEN 16:3 | ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು. |
449 | GEN 18:24 | ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? |
451 | GEN 18:26 | ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು. |
453 | GEN 18:28 | ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. |
523 | GEN 21:9 | ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು, |
535 | GEN 21:21 | ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು. |
671 | GEN 25:12 | ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ. |
677 | GEN 25:18 | ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು. |
695 | GEN 26:2 | ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು. |
706 | GEN 26:13 | ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು. |
848 | GEN 30:17 | ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು. |
875 | GEN 31:1 | “ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು. |
1109 | GEN 37:25 | ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು. |
1112 | GEN 37:28 | ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು. |
1120 | GEN 37:36 | ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು. |
1151 | GEN 39:1 | ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು. |
1152 | GEN 39:2 | ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು. |
1155 | GEN 39:5 | ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು. |
1174 | GEN 40:1 | ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು. |
1178 | GEN 40:5 | ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. |
1204 | GEN 41:8 | ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ. |
1215 | GEN 41:19 | ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ. |
1225 | GEN 41:29 | ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು. |
1226 | GEN 41:30 | ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು. |
1229 | GEN 41:33 | “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು. |
1230 | GEN 41:34 | ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು. |
1232 | GEN 41:36 | ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು. |
1237 | GEN 41:41 | ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ, |
1239 | GEN 41:43 | ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು. |
1240 | GEN 41:44 | ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು. |
1241 | GEN 41:45 | ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು. |
1242 | GEN 41:46 | ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು. |
1244 | GEN 41:48 | ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು. |
1249 | GEN 41:53 | ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ |
1250 | GEN 41:54 | ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು. |
1251 | GEN 41:55 | ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು. |
1252 | GEN 41:56 | ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು. |
1253 | GEN 41:57 | ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು. |
1254 | GEN 42:1 | ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?” |
1255 | GEN 42:2 | “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು. |
1256 | GEN 42:3 | ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು. |
1258 | GEN 42:5 | ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು. |
1259 | GEN 42:6 | ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು. |
1293 | GEN 43:2 | ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು. |
1306 | GEN 43:15 | ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು. |
1323 | GEN 43:32 | ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು. |
1325 | GEN 43:34 | ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು. |
1361 | GEN 45:2 | ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು. |
1363 | GEN 45:4 | ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ. |
1365 | GEN 45:6 | ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ. |
1367 | GEN 45:8 | “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ. |
1368 | GEN 45:9 | ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ. |
1370 | GEN 45:11 | ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ. |
1372 | GEN 45:13 | ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ, |
1377 | GEN 45:18 | ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ. |
1378 | GEN 45:19 | ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ. |
1379 | GEN 45:20 | ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು. |
1381 | GEN 45:22 | ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು. |
1382 | GEN 45:23 | ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು. |
1384 | GEN 45:25 | ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು. |
1385 | GEN 45:26 | ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ. |
1390 | GEN 46:3 | ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು. |
1391 | GEN 46:4 | ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು. |
1393 | GEN 46:6 | ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು. |
1394 | GEN 46:7 | ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. |
1395 | GEN 46:8 | ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು. |
1407 | GEN 46:20 | ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್. |
1413 | GEN 46:26 | ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ. |