94 | GEN 4:14 | ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. |
263 | GEN 10:28 | ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು. |
264 | GEN 10:29 | ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು. |
347 | GEN 14:10 | ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು. |
372 | GEN 15:11 | ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. |
388 | GEN 16:6 | ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. |
390 | GEN 16:8 | “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. |
427 | GEN 18:2 | ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ. |
431 | GEN 18:6 | ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. |
432 | GEN 18:7 | ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. |
475 | GEN 19:17 | ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು. |
477 | GEN 19:19 | ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು. |
609 | GEN 24:17 | ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು. |
620 | GEN 24:28 | ಆ ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು. |
621 | GEN 24:29 | ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು. |
808 | GEN 29:12 | “ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು. |
809 | GEN 29:13 | ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು. |
965 | GEN 33:4 | ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು. |
1013 | GEN 35:1 | ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. |
1016 | GEN 35:4 | ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು. |
1019 | GEN 35:7 | ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು. |
1052 | GEN 36:11 | ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್, |
1056 | GEN 36:15 | ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್, |
1064 | GEN 36:23 | ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್. |
1124 | GEN 38:4 | ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ “ಓನಾನ್” ಎಂದು ಹೆಸರಿಟ್ಟಳು. |
1128 | GEN 38:8 | ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು. |
1129 | GEN 38:9 | ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು. |
1136 | GEN 38:16 | ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು. |
1162 | GEN 39:12 | ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು. |
1165 | GEN 39:15 | ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು. |
1168 | GEN 39:18 | ನಾನು ಜೋರಾಗಿ ಕೂಗಿಕೊಂಡಾಗ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದು ಹೇಳಿದಳು. |
1241 | GEN 41:45 | ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು. |
1246 | GEN 41:50 | ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು. |
1397 | GEN 46:10 | ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ. |
1399 | GEN 46:12 | ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್. |
1407 | GEN 46:20 | ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್. |
1570 | EXO 2:15 | ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು. |
1572 | EXO 2:17 | ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು. |
1605 | EXO 4:3 | ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು. |
1671 | EXO 6:15 | ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು. |
1895 | EXO 14:5 | ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು. |
1915 | EXO 14:25 | ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು. |
1917 | EXO 14:27 | ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು. |
1984 | EXO 16:36 | ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ. |
2091 | EXO 21:13 | ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು. |
2172 | EXO 23:27 | ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು. |
2173 | EXO 23:28 | ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು. |
2185 | EXO 24:7 | ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು. |
2441 | EXO 32:2 | ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು. |
2442 | EXO 32:3 | ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು. |
3532 | LEV 26:7 | ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ. |
3533 | LEV 26:8 | ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು. |
3542 | LEV 26:17 | ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ. |
3561 | LEV 26:36 | “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು. |
3562 | LEV 26:37 | ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ. |
3587 | LEV 27:16 | “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು. |
4024 | NUM 10:35 | ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು. |
4052 | NUM 11:27 | ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು. |
4196 | NUM 16:1 | ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಕರೆದುಕೊಂಡು, ಕೆಲವು ಜನರನ್ನು ಕೂಡಿಸಿದರು. |
4229 | NUM 16:34 | ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು. |
4242 | NUM 17:12 | ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. |
4351 | NUM 21:10 | ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು. |
4352 | NUM 21:11 | ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು. |
4374 | NUM 21:33 | ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು. |
4510 | NUM 26:19 | ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು. |
4753 | NUM 32:33 | ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು. |
4805 | NUM 33:43 | ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು. |
4806 | NUM 33:44 | ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು. |
4853 | NUM 35:6 | ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು. |
4858 | NUM 35:11 | ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು. |
4862 | NUM 35:15 | ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು. |
4872 | NUM 35:25 | ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. |
4873 | NUM 35:26 | “‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ, |
4879 | NUM 35:32 | ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. |
4898 | DEU 1:4 | ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು. |
4978 | DEU 3:1 | ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು. |
4980 | DEU 3:3 | ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು. |
4981 | DEU 3:4 | ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು. |
4987 | DEU 3:10 | ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು. |
4988 | DEU 3:11 | (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.) |
4990 | DEU 3:13 | ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು. |
5033 | DEU 4:27 | ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ. |
5048 | DEU 4:42 | ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು. |
5053 | DEU 4:47 | ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು. |
5385 | DEU 17:19 | ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು. |
5411 | DEU 19:3 | ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು. |
5412 | DEU 19:4 | ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. |
5413 | DEU 19:5 | ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. |
5420 | DEU 19:12 | ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು. |
5620 | DEU 28:7 | ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. |
5638 | DEU 28:25 | ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು. |
5688 | DEU 29:6 | ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು. |
5734 | DEU 31:4 | ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು. |
5741 | DEU 31:11 | ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು. |