461 | GEN 19:3 | ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು. |
522 | GEN 21:8 | ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. |
723 | GEN 26:30 | ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು. |
818 | GEN 29:22 | ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು. |
1193 | GEN 40:20 | ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು. |
4474 | NUM 25:2 | ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು. |
6921 | JDG 14:10 | ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು. |
6923 | JDG 14:12 | ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು. |
6928 | JDG 14:17 | ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು. |
7900 | 1SA 25:36 | ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ. |
8104 | 2SA 3:20 | ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು. |
8343 | 2SA 13:23 | ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು. |
8729 | 1KI 1:9 | ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು. |
8739 | 1KI 1:19 | ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. |
8745 | 1KI 1:25 | ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ. |
8746 | 1KI 1:26 | ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ. |
8769 | 1KI 1:49 | ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು. |
8834 | 1KI 3:15 | ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು. |
9411 | 1KI 19:21 | ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು. |
9701 | 2KI 6:23 | ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ. |
11549 | 2CH 18:2 | ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು. |
11854 | 2CH 30:22 | ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು. |
12709 | EST 1:3 | ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು. |
12711 | EST 1:5 | ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು. |
12713 | EST 1:7 | ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು. |
12715 | EST 1:9 | ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು. |
12746 | EST 2:18 | ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. |
12787 | EST 5:4 | ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು. |
12788 | EST 5:5 | ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು. |
12791 | EST 5:8 | ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು. |
12795 | EST 5:12 | “ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ. |
12797 | EST 5:14 | ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು. |
12811 | EST 6:14 | ಅವರು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು. |
12812 | EST 7:1 | ಅರಸನು ಹಾಮಾನನೊಡನೆ ಎಸ್ತೇರಳ ಮನೆಗೆ ಔತಣಕ್ಕಾಗಿ ಬಂದನು. |
12877 | JOB 1:4 | ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು. |
12878 | JOB 1:5 | ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು. |
12886 | JOB 1:13 | ಇದಾದ ಬಳಿಕ ಒಂದು ದಿನ ಯೋಬನ ಗಂಡು ಹೆಣ್ಣು ಮಕ್ಕಳು ಹಿರಿಯವನ ಮನೆಯಲ್ಲಿ ಔತಣದಲ್ಲಿ ಊಟಮಾಡಿ ಕುಡಿಯುತ್ತಿರುವಾಗ, |
14257 | PSA 23:5 | ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. |
15135 | PSA 75:9 | ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು. |
16710 | PRO 9:2 | ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ. |
16892 | PRO 15:15 | ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ. |
16944 | PRO 17:1 | ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು. |
16965 | PRO 17:22 | ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ. |
17501 | ECC 7:2 | ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು. |
17579 | ECC 10:16 | ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ! |
17582 | ECC 10:19 | ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು. |
17619 | SNG 1:12 | ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು. |
17628 | SNG 2:4 | ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ. |
17821 | ISA 5:12 | ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ. |
18110 | ISA 21:5 | ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ! |
18194 | ISA 25:6 | ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. |
18977 | ISA 65:11 | ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು. |
19244 | JER 8:22 | ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ? |
19413 | JER 16:8 | ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ. |
19749 | JER 30:13 | ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ. |
20125 | JER 46:11 | ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು. |
20289 | JER 51:8 | ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು. |
20320 | JER 51:39 | ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ. |
21117 | EZK 23:41 | ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ. |
21294 | EZK 30:21 | “ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.” |
21537 | EZK 39:20 | ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ. |
21760 | EZK 47:12 | ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.” |
21944 | DAN 5:1 | ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು. |
21953 | DAN 5:10 | ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ! |
22863 | ZEP 1:7 | ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ. |
23943 | MAT 22:2 | “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. |
23945 | MAT 22:4 | ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು. |
23949 | MAT 22:8 | ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ. |
23950 | MAT 22:9 | ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು. |
23952 | MAT 22:11 | ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು, |
23993 | MAT 23:6 | ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; |
24497 | MRK 6:21 | ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ, |
24781 | MRK 12:39 | ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ. |
25043 | LUK 2:1 | ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. |
25205 | LUK 5:29 | ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು. |
25564 | LUK 12:36 | ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. |
25616 | LUK 13:29 | ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು. |
25635 | LUK 14:13 | ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, |
25638 | LUK 14:16 | ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು. |
25639 | LUK 14:17 | ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು. |
25646 | LUK 14:24 | ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು. |
25894 | LUK 20:46 | “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. |
26172 | JHN 2:8 | ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. |
26173 | JHN 2:9 | ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, |
26651 | JHN 12:2 | ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು. |
27924 | ACT 27:1 | ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. |
29002 | 2CO 8:2 | ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. |
30580 | 2PE 2:13 | ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ. |
31095 | REV 19:9 | ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು. |
31103 | REV 19:17 | ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ, |