43 | GEN 2:12 | ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ. |
85 | GEN 4:5 | ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು. |
87 | GEN 4:7 | ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. |
94 | GEN 4:14 | ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. |
107 | GEN 5:1 | ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು. |
139 | GEN 6:1 | ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು |
145 | GEN 6:7 | ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. |
189 | GEN 8:5 | ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು. |
229 | GEN 9:23 | ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ. |
301 | GEN 12:2 | ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ. |
335 | GEN 13:16 | ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು. |
503 | GEN 20:7 | ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು. |
525 | GEN 21:11 | ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. |
565 | GEN 22:17 | ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. |
659 | GEN 24:67 | ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು. |
675 | GEN 25:16 | ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. |
762 | GEN 27:34 | ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು, |
769 | GEN 27:41 | ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು. |
788 | GEN 28:14 | ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು. |
796 | GEN 28:22 | ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು. |
800 | GEN 29:4 | ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು. |
866 | GEN 30:35 | ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು. |
870 | GEN 30:39 | ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು. |
871 | GEN 30:40 | ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು. |
876 | GEN 31:2 | ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ. |
879 | GEN 31:5 | ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ. |
882 | GEN 31:8 | ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು. |
884 | GEN 31:10 | “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು. |
886 | GEN 31:12 | ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ. |
941 | GEN 32:13 | ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು. |
1056 | GEN 36:15 | ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್, |
1060 | GEN 36:19 | ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು. |
1062 | GEN 36:21 | ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು. |
1070 | GEN 36:29 | ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ |
1071 | GEN 36:30 | ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು. |
1084 | GEN 36:43 | ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು. |
1118 | GEN 37:34 | ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು. |
1119 | GEN 37:35 | ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. |
1132 | GEN 38:12 | ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು. |
1135 | GEN 38:15 | ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು. |
1151 | GEN 39:1 | ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು. |
1175 | GEN 40:2 | ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು, |
1180 | GEN 40:7 | ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. |
1182 | GEN 40:9 | ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು. |
1187 | GEN 40:14 | ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು. |
1189 | GEN 40:16 | ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು. |
1193 | GEN 40:20 | ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು. |
1194 | GEN 40:21 | ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು. |
1195 | GEN 40:22 | ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು. |
1196 | GEN 40:23 | ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು. |
1205 | GEN 41:9 | ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. |
1206 | GEN 41:10 | ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ, |
1209 | GEN 41:13 | ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು. |
1231 | GEN 41:35 | ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ. |
1232 | GEN 41:36 | ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು. |
1244 | GEN 41:48 | ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು. |
1245 | GEN 41:49 | ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು. |
1255 | GEN 42:2 | “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು. |
1256 | GEN 42:3 | ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು. |
1291 | GEN 42:38 | ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. |
1293 | GEN 43:2 | ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು. |
1294 | GEN 43:3 | ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ. |
1295 | GEN 43:4 | ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ. |
1296 | GEN 43:5 | ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ. |
1322 | GEN 43:31 | ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು. |
1338 | GEN 44:13 | ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು. |
1348 | GEN 44:23 | ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ. |
1351 | GEN 44:26 | ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು. |
1354 | GEN 44:29 | ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. |
1356 | GEN 44:31 | ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು. |
1359 | GEN 44:34 | ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು. |
1360 | GEN 45:1 | ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ. |
1364 | GEN 45:5 | ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. |
1377 | GEN 45:18 | ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ. |
1417 | GEN 46:30 | ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು. |
1430 | GEN 47:9 | ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು. |
1463 | GEN 48:11 | ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು. |
1477 | GEN 49:3 | ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ. |
1489 | GEN 49:15 | ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು. |
1508 | GEN 50:1 | ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು. |
1514 | GEN 50:7 | ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ |
1540 | EXO 1:7 | ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು. |
1542 | EXO 1:9 | ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ. |
1586 | EXO 3:6 | ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು. |
1587 | EXO 3:7 | ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು. |
1640 | EXO 5:7 | “ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ, |
1670 | EXO 6:14 | ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು. |
1714 | EXO 7:28 | ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು. |
1806 | EXO 10:28 | ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು. |
1807 | EXO 10:29 | ಅದಕ್ಕೆ ಮೋಶೆಯು, “ನೀನು ಸರಿಯಾಗಿ ಹೇಳಿದೆ. ಇನ್ನು ಮೇಲೆ ನಾನು ನಿನ್ನ ಮುಖವನ್ನು ಪುನಃ ನೋಡುವುದಿಲ್ಲ” ಎಂದನು. |