2 | GEN 1:2 | ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. |
14 | GEN 1:14 | ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. |
16 | GEN 1:16 | ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. |
20 | GEN 1:20 | ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. |
21 | GEN 1:21 | ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
28 | GEN 1:28 | ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. |
35 | GEN 2:4 | ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ. |
47 | GEN 2:16 | ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. |
56 | GEN 2:25 | ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ. |
60 | GEN 3:4 | ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ. |
61 | GEN 3:5 | ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು. |
64 | GEN 3:8 | ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು. |
66 | GEN 3:10 | ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. |
69 | GEN 3:13 | ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. |
71 | GEN 3:15 | ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು. |
72 | GEN 3:16 | ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. |
77 | GEN 3:21 | ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
84 | GEN 4:4 | ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು. |
85 | GEN 4:5 | ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು. |
87 | GEN 4:7 | ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. |
99 | GEN 4:19 | ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು. |
102 | GEN 4:22 | ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ. |
103 | GEN 4:23 | ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು. |
139 | GEN 6:1 | ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು |
143 | GEN 6:5 | ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು. |
146 | GEN 6:8 | ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು. |
147 | GEN 6:9 | ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು. |
152 | GEN 6:14 | ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು. |
154 | GEN 6:16 | ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು. |
176 | GEN 7:16 | ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು. |
177 | GEN 7:17 | ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು. |
178 | GEN 7:18 | ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು. |
179 | GEN 7:19 | ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು. |
180 | GEN 7:20 | ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ, |
181 | GEN 7:21 | ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. |
186 | GEN 8:2 | ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು. |
193 | GEN 8:9 | ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. |
195 | GEN 8:11 | ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು. |
201 | GEN 8:17 | ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. |
205 | GEN 8:21 | ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. |
206 | GEN 8:22 | ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು. |
207 | GEN 9:1 | ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. |
209 | GEN 9:3 | ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ. |
213 | GEN 9:7 | ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. |
221 | GEN 9:15 | ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ. |
229 | GEN 9:23 | ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ. |
230 | GEN 9:24 | ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು, |
236 | GEN 10:1 | ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. |
241 | GEN 10:6 | ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು. |
248 | GEN 10:13 | ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು. |
253 | GEN 10:18 | ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು. |
254 | GEN 10:19 | ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ. |
261 | GEN 10:26 | ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ, |
270 | GEN 11:3 | “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. |
271 | GEN 11:4 | ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. |
275 | GEN 11:8 | ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. |
276 | GEN 11:9 | ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು. |
294 | GEN 11:27 | ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು. |
305 | GEN 12:6 | ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. |
307 | GEN 12:8 | ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ |
329 | GEN 13:10 | ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು. |
333 | GEN 13:14 | ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು. |
339 | GEN 14:2 | ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು. |
344 | GEN 14:7 | ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು. |
345 | GEN 14:8 | ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ, |
355 | GEN 14:18 | ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು. |
374 | GEN 15:13 | ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು. |
392 | GEN 16:10 | ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು. |
411 | GEN 17:13 | ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು. |
433 | GEN 18:8 | ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು. |
462 | GEN 19:4 | ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ, |
467 | GEN 19:9 | ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು. |
468 | GEN 19:10 | ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು. |
469 | GEN 19:11 | ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು. |
473 | GEN 19:15 | ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು. |
474 | GEN 19:16 | ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು. |
480 | GEN 19:22 | ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು. |
481 | GEN 19:23 | ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು. |
488 | GEN 19:30 | ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು. |
512 | GEN 20:16 | ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು. |
516 | GEN 21:2 | ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು. |
521 | GEN 21:7 | ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. |
547 | GEN 21:33 | ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು. |
558 | GEN 22:10 | ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು. |
565 | GEN 22:17 | ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. |
569 | GEN 22:21 | ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು. |