3 | GEN 1:3 | ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. |
6 | GEN 1:6 | ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. |
10 | GEN 1:10 | ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. |
11 | GEN 1:11 | ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. |
12 | GEN 1:12 | ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು |
20 | GEN 1:20 | ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. |
21 | GEN 1:21 | ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
24 | GEN 1:24 | ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. |
25 | GEN 1:25 | ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
28 | GEN 1:28 | ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. |
29 | GEN 1:29 | ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ |
30 | GEN 1:30 | ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. |
38 | GEN 2:7 | ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು. |
40 | GEN 2:9 | ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. |
48 | GEN 2:17 | ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. |
50 | GEN 2:19 | ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. |
57 | GEN 3:1 | ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. |
62 | GEN 3:6 | ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. |
63 | GEN 3:7 | ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು. |
64 | GEN 3:8 | ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು. |
67 | GEN 3:11 | ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. |
68 | GEN 3:12 | ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು. |
70 | GEN 3:14 | ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. |
71 | GEN 3:15 | ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು. |
73 | GEN 3:17 | ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
80 | GEN 3:24 | ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು. |
106 | GEN 4:26 | ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು. |
142 | GEN 6:4 | ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು. |
145 | GEN 6:7 | ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. |
147 | GEN 6:9 | ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು. |
155 | GEN 6:17 | ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು. |
157 | GEN 6:19 | ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು. |
158 | GEN 6:20 | ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು. |
163 | GEN 7:3 | ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು. |
164 | GEN 7:4 | ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. |
165 | GEN 7:5 | ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು. |
166 | GEN 7:6 | ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು. |
169 | GEN 7:9 | ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು. |
170 | GEN 7:10 | ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು. |
171 | GEN 7:11 | ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು. |
174 | GEN 7:14 | ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ |
175 | GEN 7:15 | ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು. |
177 | GEN 7:17 | ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು. |
181 | GEN 7:21 | ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. |
182 | GEN 7:22 | ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು. |
183 | GEN 7:23 | ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು. |
195 | GEN 8:11 | ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು. |
201 | GEN 8:17 | ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. |
203 | GEN 8:19 | ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು. |
204 | GEN 8:20 | ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು. |
205 | GEN 8:21 | ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. |
210 | GEN 9:4 | ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ. |
211 | GEN 9:5 | ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ? |
216 | GEN 9:10 | ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. |
217 | GEN 9:11 | ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. |
218 | GEN 9:12 | ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. |
219 | GEN 9:13 | ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ. |
221 | GEN 9:15 | ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ. |
222 | GEN 9:16 | ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು. |
223 | GEN 9:17 | ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು. |
225 | GEN 9:19 | ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು. |
236 | GEN 10:1 | ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. |
240 | GEN 10:5 | ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು. |
245 | GEN 10:10 | ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು. |
254 | GEN 10:19 | ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ. |
255 | GEN 10:20 | ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. |
262 | GEN 10:27 | ಹದೋರಾಮ್, ಊಜಾಲ್, ದಿಕ್ಲಾ, |
264 | GEN 10:29 | ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು. |
266 | GEN 10:31 | ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು. |
267 | GEN 10:32 | ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. |
269 | GEN 11:2 | ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು. |
270 | GEN 11:3 | “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. |
273 | GEN 11:6 | ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. |
277 | GEN 11:10 | ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು. |
297 | GEN 11:30 | ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ. |