8165 | 2SA 6:5 | ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು. |
12400 | NEH 5:13 | ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು. |
16469 | PSA 150:5 | ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. |
18716 | ISA 49:10 | ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು. |
18768 | ISA 52:2 | ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ! |
20537 | EZK 1:4 | ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು. |
21514 | EZK 38:20 | ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’” |
22254 | HOS 7:7 | ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ. |
22771 | NAM 2:4 | ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ. |
23500 | MAT 10:14 | ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. |
24487 | MRK 6:11 | ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು. |
25375 | LUK 9:5 | ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು. |
25443 | LUK 10:11 | ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ. |
27482 | ACT 13:51 | ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು. |
27632 | ACT 18:6 | ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ, |
27972 | ACT 28:5 | ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ. |
30894 | REV 7:16 | ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. |