3 | GEN 1:3 | ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. |
48 | GEN 2:17 | ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. |
62 | GEN 3:6 | ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. |
67 | GEN 3:11 | ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. |
73 | GEN 3:17 | ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
165 | GEN 7:5 | ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು. |
204 | GEN 8:20 | ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು. |
221 | GEN 9:15 | ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ. |
222 | GEN 9:16 | ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು. |
306 | GEN 12:7 | ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. |
307 | GEN 12:8 | ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ |
323 | GEN 13:4 | ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ |
337 | GEN 13:18 | ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು. |
503 | GEN 20:7 | ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು. |
551 | GEN 22:3 | ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. |
554 | GEN 22:6 | ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು. |
557 | GEN 22:9 | ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು. |
580 | GEN 23:8 | ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ, |
680 | GEN 25:21 | ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು. |
698 | GEN 26:5 | ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು. |
704 | GEN 26:11 | ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು. |
718 | GEN 26:25 | ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು. |
775 | GEN 28:1 | ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು. |
928 | GEN 31:54 | ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು. |
938 | GEN 32:10 | ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ, |
981 | GEN 33:20 | ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು. |
1013 | GEN 35:1 | ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. |
1015 | GEN 35:3 | ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು. |
1019 | GEN 35:7 | ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು. |
1187 | GEN 40:14 | ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು. |
1205 | GEN 41:9 | ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. |
1376 | GEN 45:17 | ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ, |
1388 | GEN 46:1 | ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು. |
1503 | GEN 49:29 | ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು. |
1555 | EXO 1:22 | ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು. |
1598 | EXO 3:18 | ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ. |
1630 | EXO 4:28 | ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು. |
1636 | EXO 5:3 | ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು. |
1641 | EXO 5:8 | ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ. |
1642 | EXO 5:9 | ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು. |
1650 | EXO 5:17 | ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ. |
1669 | EXO 6:13 | ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು. |
1688 | EXO 7:2 | ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು. |
1692 | EXO 7:6 | ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು. |
1695 | EXO 7:9 | “ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು. |
1696 | EXO 7:10 | ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು. |
1702 | EXO 7:16 | ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ. |
1706 | EXO 7:20 | ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು. |
1712 | EXO 7:26 | ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು. |
1719 | EXO 8:4 | ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು. |
1731 | EXO 8:16 | ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. |
1736 | EXO 8:21 | ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ” ಎಂದನು. |
1737 | EXO 8:22 | ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ? |
1738 | EXO 8:23 | ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು. |
1739 | EXO 8:24 | ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು. |
1740 | EXO 8:25 | ಅದಕ್ಕೆ ಮೋಶೆಯು, “ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು” ಎಂದನು. |
1756 | EXO 9:13 | ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. |
1781 | EXO 10:3 | ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು. |
1803 | EXO 10:25 | ಅದಕ್ಕೆ ಮೋಶೆಯು, “ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು. |
1831 | EXO 12:14 | ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು. |
1837 | EXO 12:20 | ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’” ಎಂದು ಆಜ್ಞಾಪಿಸಿದನು. |
1845 | EXO 12:28 | ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು. |
1867 | EXO 12:50 | ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು. |
1877 | EXO 13:9 | ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು. |
1884 | EXO 13:16 | ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು. |
1894 | EXO 14:4 | ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು. |
1947 | EXO 15:26 | ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು. |
1952 | EXO 16:4 | ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ. |
1957 | EXO 16:9 | ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು. |
1964 | EXO 16:16 | ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು. |
1972 | EXO 16:24 | ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ. |
1976 | EXO 16:28 | ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ? |
1980 | EXO 16:32 | ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು. |
1982 | EXO 16:34 | ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು. |
1998 | EXO 17:14 | ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು. |
1999 | EXO 17:15 | ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು. |
2012 | EXO 18:12 | ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು. |
2016 | EXO 18:16 | ಹಾಗೆಯೇ ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ” ಎಂದು ಹೇಳಿದನು. |
2020 | EXO 18:20 | ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು. |
2034 | EXO 19:7 | ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. |
2050 | EXO 19:23 | ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು. |
2053 | EXO 20:1 | ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು: |
2058 | EXO 20:6 | ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು. |
2076 | EXO 20:24 | ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. |
2077 | EXO 20:25 | ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು. |
2078 | EXO 20:26 | ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು. |
2092 | EXO 21:14 | ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು. |
2134 | EXO 22:19 | ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು. |
2160 | EXO 23:15 | ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು. |
2163 | EXO 23:18 | ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು. |