332 | GEN 13:13 | ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು. |
443 | GEN 18:18 | ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ; |
578 | GEN 23:6 | “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು |
602 | GEN 24:10 | ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು. |
682 | GEN 25:23 | ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು. |
709 | GEN 26:16 | ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ; |
743 | GEN 27:15 | ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು. |
872 | GEN 30:41 | ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ. |
873 | GEN 30:42 | ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು. |
1260 | GEN 42:7 | ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು. |
1302 | GEN 43:11 | ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. |
1381 | GEN 45:22 | ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು. |
1471 | GEN 48:19 | ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು. |
1478 | GEN 49:4 | ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು! |
1547 | EXO 1:14 | ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು. |
1608 | EXO 4:6 | ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು. |
1613 | EXO 4:11 | ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ? |
1623 | EXO 4:21 | ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ. |
1665 | EXO 6:9 | ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ. |
1689 | EXO 7:3 | ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು. |
1699 | EXO 7:13 | ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು. |
1700 | EXO 7:14 | ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ. |
1708 | EXO 7:22 | ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು. |
1726 | EXO 8:11 | ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು. |
1730 | EXO 8:15 | ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು. |
1743 | EXO 8:28 | ಆದರೂ ಫರೋಹನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಜನರಿಗೆ ಹೋಗುವುದಕ್ಕೆ ಅಪ್ಪಣೆ ಕೊಡಲಿಲ್ಲ. |
1750 | EXO 9:7 | ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ. |
1755 | EXO 9:12 | ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು. |
1777 | EXO 9:34 | ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು. |
1778 | EXO 9:35 | ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ. |
1779 | EXO 10:1 | ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು. |
1780 | EXO 10:2 | ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು. |
1798 | EXO 10:20 | ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ. |
1805 | EXO 10:27 | ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು. |
1810 | EXO 11:3 | ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು. |
1817 | EXO 11:10 | ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು. |
1870 | EXO 13:2 | “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು. |
1883 | EXO 13:15 | ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು. |
1894 | EXO 14:4 | ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು. |
1895 | EXO 14:5 | ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು. |
1897 | EXO 14:7 | ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು. |
1898 | EXO 14:8 | ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು. |
1907 | EXO 14:17 | ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು. |
1925 | EXO 15:4 | ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು. |
2026 | EXO 18:26 | ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು. |
2033 | EXO 19:6 | ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು. |
2096 | EXO 21:18 | ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು, |
2164 | EXO 23:19 | ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. |
2188 | EXO 24:10 | ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು. |
2297 | EXO 28:3 | ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು. |
2335 | EXO 28:41 | ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು. |
2338 | EXO 29:1 | ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು. |
2346 | EXO 29:9 | ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು. |
2359 | EXO 29:22 | ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು, |
2363 | EXO 29:26 | ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ. |
2364 | EXO 29:27 | ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು. |
2366 | EXO 29:29 | ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು. |
2368 | EXO 29:31 | ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು. |
2370 | EXO 29:33 | ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು. |
2371 | EXO 29:34 | ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು. |
2372 | EXO 29:35 | ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು. |
2373 | EXO 29:36 | ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು. |
2374 | EXO 29:37 | ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. |
2377 | EXO 29:40 | ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು. |
2401 | EXO 30:18 | “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು. |
2406 | EXO 30:23 | “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ, |
2411 | EXO 30:28 | ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು. |
2430 | EXO 31:9 | ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ, |
2461 | EXO 32:22 | ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ? |
2468 | EXO 32:29 | ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು. |
2523 | EXO 34:26 | ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.” |
2548 | EXO 35:16 | ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ, |
2554 | EXO 35:22 | ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು. |
2642 | EXO 38:8 | ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು. |
2705 | EXO 39:40 | ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೂಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು, |
2717 | EXO 40:9 | “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು. |
2718 | EXO 40:10 | ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು. |
2719 | EXO 40:11 | ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು. |
2721 | EXO 40:13 | ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು. |
2915 | LEV 7:35 | ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು. |
2916 | LEV 7:36 | ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು. |
2917 | LEV 7:37 | ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು. |
2928 | LEV 8:10 | ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. |
2929 | LEV 8:11 | ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. |
2930 | LEV 8:12 | ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು. |
2933 | LEV 8:15 | ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು. |
2948 | LEV 8:30 | ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು. |
3055 | LEV 13:2 | “ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು. |
3056 | LEV 13:3 | ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. |
3061 | LEV 13:8 | ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. |
3062 | LEV 13:9 | “ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. |
3063 | LEV 13:10 | ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು. |
3068 | LEV 13:15 | ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ. |
3073 | LEV 13:20 | ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. |
3075 | LEV 13:22 | ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ. |
3078 | LEV 13:25 | ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. |
3080 | LEV 13:27 | ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. |