52 | GEN 2:21 | ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. |
373 | GEN 15:12 | ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು. |
592 | GEN 23:20 | ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು. |
1262 | GEN 42:9 | ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು. |
1264 | GEN 42:11 | ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು. |
1267 | GEN 42:14 | ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ. |
1269 | GEN 42:16 | ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು. |
1283 | GEN 42:30 | ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು. |
1284 | GEN 42:31 | ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ. |
1287 | GEN 42:34 | ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು. |
2122 | EXO 22:7 | ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. |
2125 | EXO 22:10 | ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ. |
4373 | NUM 21:32 | ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. |
5005 | DEU 3:28 | ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು. |
5838 | DEU 33:26 | ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು. |
5872 | JOS 2:1 | ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. |
5879 | JOS 2:8 | ಆ ಗೂಢಚಾರರು ಮಲಗಿಕೊಳ್ಳುವ ಮೊದಲೇ ಆಕೆಯು ಮಾಳಿಗೆ ಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನೆಂದರೆ |
5885 | JOS 2:14 | ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು. |
5893 | JOS 2:22 | ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು. |
5968 | JOS 6:17 | ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ. |
5973 | JOS 6:22 | ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು |
5976 | JOS 6:25 | ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ. |
6534 | JDG 1:23 | ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು. |
6538 | JDG 1:27 | ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು. |
6622 | JDG 4:21 | ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು. |
6997 | JDG 18:2 | ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. |
7113 | JDG 21:9 | ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು. |
7199 | RUT 4:7 | ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು. |
7237 | 1SA 1:23 | ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು. |
7912 | 1SA 26:4 | ಅವನು ಕೂಡಲೇ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು. |
7920 | 1SA 26:12 | ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು. |
8402 | 2SA 15:10 | ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು. |
8734 | 1KI 1:14 | ನೀನು ಅರಸನೊಡನೆ ಮಾತನಾಡುತ್ತಿರುವಾಗ ನಾನು ಬಂದು ನಿನ್ನ ಮಾತನ್ನು ದೃಢಪಡಿಸುವೆನು” ಎಂದನು. |
8839 | 1KI 3:20 | ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು. |
9948 | 2KI 15:19 | ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು. |
10021 | 2KI 17:34 | ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ. |
10758 | 1CH 12:34 | ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು. |
11200 | 2CH 1:1 | ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು. |
12188 | EZR 7:10 | ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು. |
12867 | EST 9:29 | ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು. |
12938 | JOB 4:4 | ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ, ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ. |
12947 | JOB 4:13 | ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ |
12957 | JOB 5:2 | ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ. |
13154 | JOB 12:22 | ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು. |
13669 | JOB 33:15 | ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ, |
13709 | JOB 34:22 | ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ. |
14013 | PSA 7:10 | ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು. |
14036 | PSA 9:5 | ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. |
14315 | PSA 27:13 | ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. |
14316 | PSA 27:14 | ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು. |
14374 | PSA 31:25 | ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ. |
14551 | PSA 40:3 | ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. |
14629 | PSA 45:5 | ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ. |
14753 | PSA 52:9 | “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. |
14791 | PSA 55:20 | ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ. |
14873 | PSA 61:8 | ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. |
14905 | PSA 64:6 | ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ. |
14986 | PSA 68:34 | ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು. |
15173 | PSA 78:2 | ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು. |
15378 | PSA 88:7 | ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ. |
15600 | PSA 102:13 | ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು. |
15643 | PSA 104:5 | ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ. |
15869 | PSA 111:8 | ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. |
15879 | PSA 112:8 | ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. |
15886 | PSA 113:5 | ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, |
16099 | PSA 119:133 | ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು. |
16474 | PRO 1:4 | ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು. |
16492 | PRO 1:22 | “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು? |
16502 | PRO 1:32 | ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. |
16586 | PRO 4:26 | ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು. |
16677 | PRO 8:5 | ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ. |
16712 | PRO 9:4 | ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ, |
16714 | PRO 9:6 | ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ. |
16721 | PRO 9:13 | ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು. |
16724 | PRO 9:16 | “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ, |
16792 | PRO 12:3 | ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ. |
16812 | PRO 12:23 | ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು. |
16833 | PRO 13:16 | ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು. |
16836 | PRO 13:19 | ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ. |
16850 | PRO 14:8 | ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ. |
16857 | PRO 14:15 | ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು. |
16891 | PRO 15:14 | ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು. |
16955 | PRO 17:12 | ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು. |
16959 | PRO 17:16 | ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ. |
16967 | PRO 17:24 | ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು. |
16971 | PRO 17:28 | ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು. |
16973 | PRO 18:2 | ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ. |
16996 | PRO 19:1 | ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ. |
17005 | PRO 19:10 | ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ. |
17010 | PRO 19:15 | ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು. |
17024 | PRO 19:29 | ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ. |
17032 | PRO 20:8 | ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು. |
17065 | PRO 21:11 | ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು. |
17123 | PRO 23:9 | ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು. |
17212 | PRO 26:1 | ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ. |
17214 | PRO 26:3 | ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ. |
17215 | PRO 26:4 | ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ. |