9 | GEN 1:9 | ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. |
47 | GEN 2:16 | ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. |
52 | GEN 2:21 | ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. |
73 | GEN 3:17 | ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. |
103 | GEN 4:23 | ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು. |
144 | GEN 6:6 | ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು. |
159 | GEN 6:21 | ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು. |
193 | GEN 8:9 | ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. |
216 | GEN 9:10 | ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. |
239 | GEN 10:4 | ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು. |
253 | GEN 10:18 | ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು. |
305 | GEN 12:6 | ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. |
323 | GEN 13:4 | ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ |
325 | GEN 13:6 | ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು. |
333 | GEN 13:14 | ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು. |
364 | GEN 15:3 | ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. |
365 | GEN 15:4 | ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು, |
368 | GEN 15:7 | ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. |
377 | GEN 15:16 | ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು. |
405 | GEN 17:7 | ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. |
417 | GEN 17:19 | ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. |
419 | GEN 17:21 | ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು. |
428 | GEN 18:3 | “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ. |
437 | GEN 18:12 | ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. |
449 | GEN 18:24 | ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? |
458 | GEN 18:33 | ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು. |
471 | GEN 19:13 | ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. |
472 | GEN 19:14 | ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು. |
485 | GEN 19:27 | ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ |
487 | GEN 19:29 | ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು. |
501 | GEN 20:5 | ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು. |
502 | GEN 20:6 | ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. |
507 | GEN 20:11 | ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು. |
509 | GEN 20:13 | ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು. |
512 | GEN 20:16 | ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು. |
524 | GEN 21:10 | ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು. |
526 | GEN 21:12 | ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು; |
545 | GEN 21:31 | ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು. |
551 | GEN 22:3 | ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. |
552 | GEN 22:4 | ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ, |
557 | GEN 22:9 | ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು. |
562 | GEN 22:14 | ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. |
581 | GEN 23:9 | ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು. |
615 | GEN 24:23 | ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?” ಎಂದು ಕೇಳಲು. |
617 | GEN 24:25 | ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು. |
623 | GEN 24:31 | ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು. |
689 | GEN 25:30 | ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. |
691 | GEN 25:32 | ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. |
700 | GEN 26:7 | ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು. |
701 | GEN 26:8 | ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು. |
715 | GEN 26:22 | ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು. |
728 | GEN 26:35 | ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು. |
732 | GEN 27:4 | ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು. |
735 | GEN 27:7 | ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ. |
737 | GEN 27:9 | ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ. |
745 | GEN 27:17 | ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು. |
753 | GEN 27:25 | ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು. |
767 | GEN 27:39 | ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು. |
785 | GEN 28:11 | ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. |
790 | GEN 28:16 | ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು. |
791 | GEN 28:17 | ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು. |
793 | GEN 28:19 | ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು. |
818 | GEN 29:22 | ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು. |
828 | GEN 29:32 | ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.” |
848 | GEN 30:17 | ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು. |
903 | GEN 31:29 | ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು. |
914 | GEN 31:40 | ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು. |
924 | GEN 31:50 | ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು. |
931 | GEN 32:3 | ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು. |
938 | GEN 32:10 | ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ, |
959 | GEN 32:31 | ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು, |
978 | GEN 33:17 | ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು. |
1000 | GEN 34:19 | ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. |
1013 | GEN 35:1 | ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು. |
1019 | GEN 35:7 | ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು. |
1020 | GEN 35:8 | ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. |
1025 | GEN 35:13 | ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು. |
1026 | GEN 35:14 | ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು. |
1027 | GEN 35:15 | ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. |
1039 | GEN 35:27 | ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ. |
1048 | GEN 36:7 | ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು. |
1055 | GEN 36:14 | ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು. |
1081 | GEN 36:40 | ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ, |
1084 | GEN 36:43 | ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು. |
1094 | GEN 37:10 | ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು. |
1120 | GEN 37:36 | ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು. |
1131 | GEN 38:11 | ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು. |
1134 | GEN 38:14 | ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು. |
1151 | GEN 39:1 | ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು. |
1152 | GEN 39:2 | ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು. |
1159 | GEN 39:9 | ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು. |
1175 | GEN 40:2 | ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು, |
1178 | GEN 40:5 | ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. |
1180 | GEN 40:7 | ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. |
1181 | GEN 40:8 | ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು. |