1 | GEN 1:1 | ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. |
2 | GEN 1:2 | ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. |
10 | GEN 1:10 | ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. |
11 | GEN 1:11 | ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. |
12 | GEN 1:12 | ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು |
15 | GEN 1:15 | ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. |
17 | GEN 1:17 | ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ |
20 | GEN 1:20 | ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. |
22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
24 | GEN 1:24 | ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. |
26 | GEN 1:26 | ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. |
28 | GEN 1:28 | ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. |
29 | GEN 1:29 | ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ |
30 | GEN 1:30 | ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. |
32 | GEN 2:1 | ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. |
35 | GEN 2:4 | ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ. |
36 | GEN 2:5 | ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. |
37 | GEN 2:6 | ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು. |
40 | GEN 2:9 | ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. |
50 | GEN 2:19 | ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. |
72 | GEN 3:16 | ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. |
73 | GEN 3:17 | ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. |
74 | GEN 3:18 | ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು. |
79 | GEN 3:23 | ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು. |
81 | GEN 4:1 | ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು. |
90 | GEN 4:10 | ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. |
91 | GEN 4:11 | ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು. |
92 | GEN 4:12 | ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು. |
94 | GEN 4:14 | ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. |
97 | GEN 4:17 | ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು. |
106 | GEN 4:26 | ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು. |
111 | GEN 5:5 | ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು. |
114 | GEN 5:8 | ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು. |
115 | GEN 5:9 | ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು. |
117 | GEN 5:11 | ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು. |
120 | GEN 5:14 | ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು. |
123 | GEN 5:17 | ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು. |
126 | GEN 5:20 | ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು. |
131 | GEN 5:25 | ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು. |
132 | GEN 5:26 | ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು. |
133 | GEN 5:27 | ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು. |
134 | GEN 5:28 | ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. |
135 | GEN 5:29 | ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು. |
136 | GEN 5:30 | ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು. |
139 | GEN 6:1 | ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು |
143 | GEN 6:5 | ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು. |
144 | GEN 6:6 | ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು. |
145 | GEN 6:7 | ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. |
149 | GEN 6:11 | ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು. |
150 | GEN 6:12 | ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು. |
151 | GEN 6:13 | ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ. |
155 | GEN 6:17 | ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು. |
163 | GEN 7:3 | ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು. |
164 | GEN 7:4 | ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. |
166 | GEN 7:6 | ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು. |
170 | GEN 7:10 | ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು. |
171 | GEN 7:11 | ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು. |
172 | GEN 7:12 | ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು. |
177 | GEN 7:17 | ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು. |
178 | GEN 7:18 | ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು. |
179 | GEN 7:19 | ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು. |
181 | GEN 7:21 | ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. |
182 | GEN 7:22 | ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು. |
183 | GEN 7:23 | ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು. |
184 | GEN 7:24 | ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು. |
185 | GEN 8:1 | ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು. |
186 | GEN 8:2 | ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು. |
189 | GEN 8:5 | ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು. |
191 | GEN 8:7 | ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು. |
193 | GEN 8:9 | ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು. |
195 | GEN 8:11 | ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು. |
197 | GEN 8:13 | ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು. |
198 | GEN 8:14 | ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು. |
201 | GEN 8:17 | ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. |
205 | GEN 8:21 | ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. |
206 | GEN 8:22 | ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು. |
207 | GEN 9:1 | ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. |
208 | GEN 9:2 | ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ. |
209 | GEN 9:3 | ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ. |
213 | GEN 9:7 | ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. |
216 | GEN 9:10 | ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. |
217 | GEN 9:11 | ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. |