| 1 | GEN 1:1 | ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. |
| 2 | GEN 1:2 | ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. |
| 3 | GEN 1:3 | ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. |
| 4 | GEN 1:4 | ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. |
| 5 | GEN 1:5 | ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. |
| 6 | GEN 1:6 | ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. |
| 7 | GEN 1:7 | ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. |
| 8 | GEN 1:8 | ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. |
| 9 | GEN 1:9 | ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. |
| 10 | GEN 1:10 | ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. |
| 11 | GEN 1:11 | ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. |
| 12 | GEN 1:12 | ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು |
| 13 | GEN 1:13 | ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. |
| 14 | GEN 1:14 | ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. |
| 15 | GEN 1:15 | ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. |
| 16 | GEN 1:16 | ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. |