Wildebeest analysis examples for:   kan-kan2017   Word!”    February 25, 2023 at 00:28    Script wb_pprint_html.py   by Ulf Hermjakob

4229  NUM 16:34  ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.
4427  NUM 23:10  ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.
8514  2SA 19:1  ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.
8518  2SA 19:5  ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
9217  1KI 13:30  ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.
9383  1KI 18:39  ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.
9603  2KI 3:23  ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
9847  2KI 11:14  ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
13471  JOB 25:6  ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”
14334  PSA 29:9  ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.
16158  PSA 122:1  “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
16226  PSA 132:7  “ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”
17844  ISA 6:5  ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
20850  EZK 16:19  ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.
20854  EZK 16:23  ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.
20865  EZK 16:34  ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!”
22076  DAN 9:19  ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”
22499  AMO 5:7  ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
22553  AMO 8:3  ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”
23058  ZEC 8:13  ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”
23904  MAT 21:9  ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
24311  MRK 1:27  ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
24630  MRK 9:23  ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
24787  MRK 13:1  ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
24823  MRK 13:37  ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.
24891  MRK 14:68  ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
26346  JHN 6:20  ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.
26635  JHN 11:43  ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
26725  JHN 13:26  ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.
30088  HEB 4:7  ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.
30890  REV 7:12  “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
30952  REV 11:12  ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
31169  REV 22:20  ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.