638 | GEN 24:46 | ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು. |
2039 | EXO 19:12 | ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’ |
3976 | NUM 9:10 | “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’ |
4219 | NUM 16:24 | “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು. |
5819 | DEU 33:7 | “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು. |
5821 | DEU 33:9 | ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ. |
5991 | JOS 7:13 | ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ. |
6454 | JOS 22:26 | ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’ |
6637 | JDG 5:12 | ‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’ |
6699 | JDG 7:3 | ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. |
7870 | 1SA 25:6 | ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ. |
8493 | 2SA 18:12 | ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ? |
12533 | NEH 9:18 | ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ, |
13074 | JOB 9:19 | ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು. |
13077 | JOB 9:22 | ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ. |
13278 | JOB 17:14 | ಸಮಾಧಿಯನ್ನು, ‘ನೀನು, ನನ್ನ ತಂದೆ’ ಎಂದೂ ಹುಳವನ್ನು, ‘ನನ್ನ ತಾಯಿ, ನನ್ನ ತಂಗಿ’ ಎಂದೂ ಕರೆಯುವುದಾದರೆ, |
13536 | JOB 28:28 | ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು. |
13832 | JOB 38:35 | ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, ‘ಇಗೋ, ಬಂದಿದ್ದೇವೆ’ ಎನ್ನುವವೋ? |
17395 | ECC 1:10 | ‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ. |
17881 | ISA 8:4 | ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು. |
18630 | ISA 44:27 | ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ. |
18826 | ISA 56:3 | ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ. |
18967 | ISA 65:1 | “ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು. |
18974 | ISA 65:8 | ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು, |
19228 | JER 8:6 | ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ. |
19263 | JER 9:18 | ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ. |
19306 | JER 11:11 | ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು. |
19377 | JER 14:15 | ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ. |
19414 | JER 16:9 | ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’ |
19464 | JER 18:11 | ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು. |
19681 | JER 27:16 | ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ. |
19837 | JER 32:37 | ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. |
19950 | JER 37:7 | “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು. |
20105 | JER 44:26 | ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ. |
20128 | JER 46:14 | “ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ. |
20152 | JER 48:3 | ‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ! |
20166 | JER 48:17 | ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ. |
20333 | JER 51:52 | ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು. |
20343 | JER 51:62 | ‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು. |
20643 | EZK 6:11 | ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು. |
20648 | EZK 7:2 | “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’ |
20797 | EZK 13:20 | “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು. |
20952 | EZK 19:2 | ‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ. |
21011 | EZK 21:3 | ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು. |
21013 | EZK 21:5 | “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು. |
21022 | EZK 21:14 | “ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! |
21041 | EZK 21:33 | ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ. |
21119 | EZK 23:43 | ಆಗ ನಾನು, ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ’ ಅಂದುಕೊಂಡೆನು. |
21146 | EZK 24:21 | ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ |
21155 | EZK 25:3 | ‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ. |
21248 | EZK 28:22 | ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು. |
21260 | EZK 29:8 | “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು. |
21262 | EZK 29:10 | ‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು. |
21359 | EZK 33:10 | “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ. |
21384 | EZK 34:2 | “ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ? |
21471 | EZK 37:5 | ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ. |
21477 | EZK 37:11 | ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ. |
21485 | EZK 37:19 | ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು. |
21497 | EZK 38:3 | ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. |
21505 | EZK 38:11 | ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ. |
21513 | EZK 38:19 | ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ. |
21518 | EZK 39:1 | ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ. |
21893 | DAN 3:17 | ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು. |
21915 | DAN 4:6 | ‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು. |
21968 | DAN 5:25 | “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’ |
22564 | AMO 8:14 | ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು. |
22668 | MIC 2:4 | ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು. |
22826 | HAB 2:9 | ‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ; |
22829 | HAB 2:12 | ‘ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ! |
22961 | ZEC 1:14 | ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ. |
23028 | ZEC 6:12 | ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು. |
23637 | MAT 13:29 | ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ. |
23822 | MAT 18:26 | ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು. |
23828 | MAT 18:32 | ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ? |
23923 | MAT 21:28 | ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು |
23953 | MAT 22:12 | ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು. |
24083 | MAT 25:6 | ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. |
24088 | MAT 25:11 | ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. |
24097 | MAT 25:20 | ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು. |
24098 | MAT 25:21 | ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು. |
24099 | MAT 25:22 | ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು. |
24100 | MAT 25:23 | ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು. |
24101 | MAT 25:24 | ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು |
24114 | MAT 25:37 | ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? |
24118 | MAT 25:41 | ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. |
24121 | MAT 25:44 | ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. |
25257 | LUK 6:42 | ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು. |
25261 | LUK 6:46 | “ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? |
25291 | LUK 7:27 | ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ. |
25298 | LUK 7:34 | ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ. |
25479 | LUK 11:5 | ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. |
25548 | LUK 12:20 | “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು. |
25594 | LUK 13:7 | ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು. |
25619 | LUK 13:32 | ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ. |
25632 | LUK 14:10 | ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು. |
25644 | LUK 14:22 | ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು. |
25669 | LUK 15:12 | ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. |
25678 | LUK 15:21 | ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು, |
25686 | LUK 15:29 | ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. |
25688 | LUK 15:31 | ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ. |