270 | GEN 11:3 | “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. |
382 | GEN 15:21 | ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು. |
1565 | EXO 2:10 | ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ” ಎಂದು ಹೆಸರಿಟ್ಟಳು. |
3813 | NUM 5:20 | ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,” |
6302 | JOS 18:7 | ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು |
6433 | JOS 22:5 | ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ |
22587 | OBA 1:8 | ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ? |
23234 | MAT 1:21 | ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. |
24271 | MAT 28:7 | ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು. |
26133 | JHN 1:20 | ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು. |
26159 | JHN 1:46 | ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು. |
26163 | JHN 1:50 | ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು. |
26192 | JHN 3:3 | ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು. |
26232 | JHN 4:7 | ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು. |
26391 | JHN 6:65 | ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು. |
26449 | JHN 7:52 | ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು. |
26954 | JHN 20:18 | ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು. |
27915 | ACT 26:24 | ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು. |
28199 | ROM 8:15 | ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. |
28276 | ROM 10:20 | ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ. |
28443 | 1CO 1:12 | ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. |
28497 | 1CO 3:19 | ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,” |
28507 | 1CO 4:6 | ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ. |
28547 | 1CO 6:12 | “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ. |
28723 | 1CO 12:21 | ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ. |
29112 | 2CO 13:1 | ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ. |
29365 | EPH 4:26 | “ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. |
29848 | 1TI 5:18 | “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ. |
30306 | HEB 12:27 | “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. |