9879 | 2KI 13:4 | ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ, |
9973 | 2KI 16:6 | ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ. |
11638 | 2CH 21:9 | ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. |
11823 | 2CH 29:27 | ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು. |
11847 | 2CH 30:15 | ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು. |
11908 | 2CH 32:28 | ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು. |
23512 | MAT 10:26 | ಆದರೂ ಅವರಿಗೆ ಹೆದರಬೇಡಿರಿ.ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ. |
23547 | MAT 11:19 | ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು. |
23625 | MAT 13:17 | ನಿಮಗೆ ಸತ್ಯವಾಗಿ ಹೇಳುತ್ತೇನೆ.ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. |
23760 | MAT 16:19 | ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು.ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು. |
23789 | MAT 17:20 | ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ, |
23848 | MAT 19:17 | ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು. |
24416 | MRK 4:24 | ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ.ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. |
24695 | MRK 10:38 | ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು.ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ?ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು. |
26164 | JHN 1:51 | ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. |
26579 | JHN 10:29 | ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು.ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. |
26680 | JHN 12:31 | ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು |
26748 | JHN 14:11 | ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. |
26815 | JHN 16:20 | ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆನಿಮ್ಮ ದುಃಖವು ಹೋಗಿ ಆನಂದ ಬರುವುದು. |
26827 | JHN 16:32 | ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ.ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ. |
26828 | JHN 16:33 | ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು. |
26840 | JHN 17:12 | ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. |
26865 | JHN 18:11 | ಆಗ ಯೇಸು ಪೇತ್ರನಿಗೆ, “ಕತ್ತಿಯನ್ನುಒರೆಯಲ್ಲಿ ಹಾಕು.ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು. |
30783 | REV 1:18 | ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. |
30789 | REV 2:4 | ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ.ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. |
30792 | REV 2:7 | ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು. |
30795 | REV 2:10 | ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು. |
30796 | REV 2:11 | ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. |
30798 | REV 2:13 | ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ. |
30799 | REV 2:14 | ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. |
30802 | REV 2:17 | ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು.ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು. |
30805 | REV 2:20 | ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ. |
30808 | REV 2:23 | ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು. |
30815 | REV 3:1 | “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು.ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ. |
30819 | REV 3:5 | ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು. |
30826 | REV 3:12 | ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು.ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. |
30834 | REV 3:20 | ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು. |
31038 | REV 16:15 | “ಇಗೋಕಳ್ಳನು ಬರುವಂತೆ ಬರುತ್ತೇನೆ.ತಾನುಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.” |
31161 | REV 22:12 | “ನೋಡು! ನಾನು ಬೇಗನೇ ಬರುತ್ತೇನೆ.ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ. |
31163 | REV 22:14 | “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು.ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು. |