6655 | JDG 5:30 | ‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’ |
7856 | 1SA 24:15 | ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?. |
11599 | 2CH 20:7 | ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?. |
18846 | ISA 57:11 | ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?. |
22303 | HOS 10:9 | ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?. |