57 | GEN 3:1 | ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. |
65 | GEN 3:9 | ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು. |
67 | GEN 3:11 | ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. |
69 | GEN 3:13 | ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. |
89 | GEN 4:9 | ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು. |
363 | GEN 15:2 | ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು. |
369 | GEN 15:8 | “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು. |
390 | GEN 16:8 | “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. |
415 | GEN 17:17 | ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು. |
437 | GEN 18:12 | ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. |
453 | GEN 18:28 | ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. |
478 | GEN 19:20 | ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು. |
543 | GEN 21:29 | ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. |
597 | GEN 24:5 | ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು. |
615 | GEN 24:23 | ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?” ಎಂದು ಕೇಳಲು. |
650 | GEN 24:58 | ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು. |
657 | GEN 24:65 | ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು. |
703 | GEN 26:10 | ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?” |
746 | GEN 27:18 | ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು. |
760 | GEN 27:32 | ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು. |
773 | GEN 27:45 | ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು. |
774 | GEN 27:46 | ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು. |
800 | GEN 29:4 | ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು. |
801 | GEN 29:5 | ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು. |
802 | GEN 29:6 | ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು. |
811 | GEN 29:15 | ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು. |
846 | GEN 30:15 | ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು. |
904 | GEN 31:30 | ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು. |
956 | GEN 32:28 | ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ, |
958 | GEN 32:30 | ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. |
966 | GEN 33:5 | ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು. |
969 | GEN 33:8 | ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು. |
1092 | GEN 37:8 | ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು. |
1094 | GEN 37:10 | ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು. |
1099 | GEN 37:15 | ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು. |
1114 | GEN 37:30 | ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು. |
1136 | GEN 38:16 | ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು. |
1149 | GEN 38:29 | ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೆಚ್” ಎಂದು ಹೆಸರಾಯಿತು. |
1159 | GEN 39:9 | ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು. |
1180 | GEN 40:7 | ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. |
1234 | GEN 41:38 | ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು. |
1254 | GEN 42:1 | ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?” |
1281 | GEN 42:28 | ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು. |
1297 | GEN 43:6 | ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು. |
1318 | GEN 43:27 | ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು. |
1320 | GEN 43:29 | ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು. |
1340 | GEN 44:15 | ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು, |
1362 | GEN 45:3 | ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು. |
1420 | GEN 46:33 | ಫರೋಹನು ನಿಮ್ಮನ್ನು ಕರೆಯಿಸಿ, “ನಿಮ್ಮ ಕಸುಬು ಏನು?” ಎಂದು ಕೇಳಿದರೆ, |
1424 | GEN 47:3 | ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು. |
1429 | GEN 47:8 | ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು. |
1436 | GEN 47:15 | ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. |
1460 | GEN 48:8 | ನಂತರ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ, “ಇವರು ಯಾರು?” ಎಂದು ಕೇಳಲು, |
1551 | EXO 1:18 | ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು. |
1562 | EXO 2:7 | ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು. |
1568 | EXO 2:13 | ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು. |
1569 | EXO 2:14 | ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು. |
1573 | EXO 2:18 | ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?” ಎಂದು ಕೇಳಿದನು. |
1591 | EXO 3:11 | ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು. |
1603 | EXO 4:1 | ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು. |
1604 | EXO 4:2 | ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು. |
1638 | EXO 5:5 | ಫರೋಹನು, “ಇಬ್ರಿಯರು ದೇಶದಲ್ಲಿ ಹೆಚ್ಚಾಗಿದ್ದಾರೆ. ಅವರು ತಮ್ಮ ಬಿಟ್ಟೀ ಕೆಲಸಗಳನ್ನು ಮಾಡದಂತೆ ನಿಲ್ಲಿಸಿ ಬಿಡುತ್ತಿದ್ದೀರಲ್ಲಾ?” ಎಂದನು. |
1668 | EXO 6:12 | ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು. |
1785 | EXO 10:7 | ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು. |
1786 | EXO 10:8 | ಅದನ್ನು ಕೇಳಿ ಫರೋಹನು, ಮೋಶೆ ಮತ್ತು ಆರೋನರನ್ನು ತಿರುಗಿ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಹುದು. ಆದರೆ ಯಾರಾರು ಹೋಗಬೇಕನ್ನುತ್ತೀರಿ?” ಎಂದು ಕೇಳಿದನು. |
1945 | EXO 15:24 | ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು. |
1955 | EXO 16:7 | ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು. |
1986 | EXO 17:2 | ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು. |
1987 | EXO 17:3 | ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು. |
1991 | EXO 17:7 | ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು. |
2014 | EXO 18:14 | ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು. |
2438 | EXO 31:17 | ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?” |
2460 | EXO 32:21 | ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು, |
2997 | LEV 10:19 | ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?” |
3973 | NUM 9:7 | ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು. |
4047 | NUM 11:22 | ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು. |
4062 | NUM 12:2 | ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು. |
4068 | NUM 12:8 | ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು. |
4198 | NUM 16:3 | ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು. |
4206 | NUM 16:11 | ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು. |
4217 | NUM 16:22 | ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು. |
4258 | NUM 17:28 | ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು. |
4322 | NUM 20:10 | ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?” |
4385 | NUM 22:9 | ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು, |
4406 | NUM 22:30 | ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು. |
4413 | NUM 22:37 | ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು. |
4429 | NUM 23:12 | ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು. |
4434 | NUM 23:17 | ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು. |
4443 | NUM 23:26 | ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು. |
4925 | DEU 1:31 | ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು. |
5108 | DEU 6:20 | ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ |
5161 | DEU 9:2 | ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ. |
5949 | JOS 5:13 | ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು |
5950 | JOS 5:14 | ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು |
5987 | JOS 7:9 | ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು. |
6046 | JOS 9:7 | ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು. |
6047 | JOS 9:8 | ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು. |
6085 | JOS 10:19 | ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು. |
6281 | JOS 17:4 | ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು. |
6291 | JOS 17:14 | ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು |