1393 | GEN 46:6 | ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು. |
1418 | GEN 46:31 | ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ; |
1422 | GEN 47:1 | ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು. |
1434 | GEN 47:13 | ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು. |
1435 | GEN 47:14 | ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು. |
1436 | GEN 47:15 | ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. |
2324 | EXO 28:30 | ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು. |
6079 | JOS 10:13 | ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು. |
6326 | JOS 19:3 | ಹಚರ್ ಷೂವಾಲ್, ಬಾಲಾ, ಎಚೆಮ್, |
6805 | JDG 9:49 | ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. |
7423 | 1SA 10:3 | ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು. |
7438 | 1SA 10:18 | ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ. |
7471 | 1SA 12:9 | ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು. |
7504 | 1SA 13:17 | ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ನಾಡಿಗೂ, |
7506 | 1SA 13:19 | ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ. |
8856 | 1KI 4:9 | ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್, ಏಲೋನ್ ಬೇತ್ ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು. |
10397 | 1CH 4:8 | ಕೋಚನಿಂದ ಅನೂಬ್ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ. |
12619 | NEH 11:27 | ಹಚರ್ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು, |
23291 | MAT 4:13 | ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು. |