59 | GEN 3:3 | ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. |
360 | GEN 14:23 | “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’ |
509 | GEN 20:13 | ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು. |
599 | GEN 24:7 | ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು. |
606 | GEN 24:14 | ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು. |
629 | GEN 24:37 | ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, ‘ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ |
631 | GEN 24:39 | ನಾನು ನನ್ನ ದಣಿಗೆ, ‘ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ’” ಎಂದು ಹೇಳಲು. |
635 | GEN 24:43 | ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು, |
636 | GEN 24:44 | ‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು, |
637 | GEN 24:45 | ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು. |
639 | GEN 24:47 | ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. |
735 | GEN 27:7 | ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ. |
828 | GEN 29:32 | ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.” |
882 | GEN 31:8 | ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು. |
886 | GEN 31:12 | ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ. |
903 | GEN 31:29 | ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು. |
933 | GEN 32:5 | ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು |
938 | GEN 32:10 | ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ, |
941 | GEN 32:13 | ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು. |
946 | GEN 32:18 | ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ, |
1294 | GEN 43:3 | ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ. |
1344 | GEN 44:19 | ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು, |
1345 | GEN 44:20 | ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು. |
1346 | GEN 44:21 | “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು, |
1347 | GEN 44:22 | ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು. |
1348 | GEN 44:23 | ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ. |
1350 | GEN 44:25 | “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ, |
1351 | GEN 44:26 | ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು. |
1352 | GEN 44:27 | ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ. |
1357 | GEN 44:32 | ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ. |
1368 | GEN 45:9 | ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ. |
1376 | GEN 45:17 | ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ, |
1456 | GEN 48:4 | ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು. |
1512 | GEN 50:5 | ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು. |
1593 | EXO 3:13 | ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು. |
1624 | EXO 4:22 | ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು. |
1641 | EXO 5:8 | ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ. |
1649 | EXO 5:16 | ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು. |
1650 | EXO 5:17 | ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ. |
1662 | EXO 6:6 | ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು. |
1695 | EXO 7:9 | “ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು. |
1702 | EXO 7:16 | ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ. |
1705 | EXO 7:19 | ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು. |
1712 | EXO 7:26 | ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು. |
1727 | EXO 8:12 | ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು. |
1731 | EXO 8:16 | ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. |
1744 | EXO 9:1 | ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ. |
1756 | EXO 9:13 | ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. |
1781 | EXO 10:3 | ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು. |
1811 | EXO 11:4 | ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು. |
1815 | EXO 11:8 | ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. |
1820 | EXO 12:3 | ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು. |
1843 | EXO 12:26 | ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ, |
1844 | EXO 12:27 | ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು. |
1882 | EXO 13:14 | ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು. |
1893 | EXO 14:3 | ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು. |
1894 | EXO 14:4 | ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು. |
1902 | EXO 14:12 | ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು. |
1930 | EXO 15:9 | ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು. |
1957 | EXO 16:9 | ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು. |
1960 | EXO 16:12 | “ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ. |
1971 | EXO 16:23 | ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು. |
1980 | EXO 16:32 | ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು. |
2031 | EXO 19:4 | ‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ. |
2050 | EXO 19:23 | ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು. |
2054 | EXO 20:2 | “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’ |
2074 | EXO 20:22 | ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ. |
2447 | EXO 32:8 | ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು. |
2451 | EXO 32:12 | ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ. |
2452 | EXO 32:13 | ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು. |
2462 | EXO 32:23 | ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು. |
2463 | EXO 32:24 | ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು. |
2466 | EXO 32:27 | ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು. |
2475 | EXO 33:1 | ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು. |
2479 | EXO 33:5 | ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು. |
2486 | EXO 33:12 | ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ. |
2748 | LEV 1:2 | “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು. |
2798 | LEV 4:2 | “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ. |
2859 | LEV 6:2 | “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು. |
2875 | LEV 6:18 | “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು. |
2903 | LEV 7:23 | “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು. |
2909 | LEV 7:29 | “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು. |
2949 | LEV 8:31 | ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ. |
2957 | LEV 9:3 | ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು, |
2981 | LEV 10:3 | ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು. |
3000 | LEV 11:2 | “ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು, |
3047 | LEV 12:2 | “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು. |
3098 | LEV 13:45 | “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು. |
3147 | LEV 14:35 | ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು. |
3171 | LEV 15:2 | “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು. |
3239 | LEV 17:3 | ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ, |
3244 | LEV 17:8 | “ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ, |
3254 | LEV 18:2 | “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು. |
3284 | LEV 19:2 | “ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. |
3321 | LEV 20:2 | “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು. |
3347 | LEV 21:1 | ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು. |
3363 | LEV 21:17 | “ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು. |
3373 | LEV 22:3 | ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು. |
3388 | LEV 22:18 | “ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ, |
3405 | LEV 23:2 | “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ. |