Wildebeest analysis examples for:   kan-kan2017   “‘Word    February 25, 2023 at 00:28    Script wb_pprint_html.py   by Ulf Hermjakob

1832  EXO 12:15  “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
2080  EXO 21:2  “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
2486  EXO 33:12  ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.
2749  LEV 1:3  “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
2751  LEV 1:5  “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
2756  LEV 1:10  “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
2760  LEV 1:14  “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
2764  LEV 2:1  “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
2767  LEV 2:4  “‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
2774  LEV 2:11  “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
2777  LEV 2:14  “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.
2780  LEV 3:1  “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
2785  LEV 3:6  “‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
2791  LEV 3:12  “‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
2809  LEV 4:13  “‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
2818  LEV 4:22  “‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
2823  LEV 4:27  “‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
2828  LEV 4:32  “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
2832  LEV 5:1  “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
2838  LEV 5:7  “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
2842  LEV 5:11  “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
2864  LEV 6:7  “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.
2881  LEV 7:1  “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.
2891  LEV 7:11  “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
2896  LEV 7:16  “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
3007  LEV 11:9  “‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
3011  LEV 11:13  “‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
3018  LEV 11:20  “‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
3022  LEV 11:24  “‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
3027  LEV 11:29  “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
3037  LEV 11:39  “‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
3039  LEV 11:41  “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
3044  LEV 11:46  “‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.
3051  LEV 12:6  “‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
3182  LEV 15:13  “‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
3185  LEV 15:16  “‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
3188  LEV 15:19  “‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
3194  LEV 15:25  “‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.
3200  LEV 15:31  “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
3246  LEV 17:10  “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
3249  LEV 17:13  “‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
3251  LEV 17:15  “‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.
3258  LEV 18:6  “‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.
3271  LEV 18:19  “‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.
3273  LEV 18:21  “‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
3274  LEV 18:22  “‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.
3276  LEV 18:24  “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
3285  LEV 19:3  “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
3286  LEV 19:4  “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
3287  LEV 19:5  “‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
3291  LEV 19:9  “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
3293  LEV 19:11  “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
3294  LEV 19:12  “‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
3295  LEV 19:13  “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
3297  LEV 19:15  “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
3298  LEV 19:16  “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
3299  LEV 19:17  “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
3300  LEV 19:18  “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
3301  LEV 19:19  “‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
3302  LEV 19:20  “‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
3305  LEV 19:23  “‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
3308  LEV 19:26  “‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
3309  LEV 19:27  “‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
3310  LEV 19:28  “‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
3311  LEV 19:29  “‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.
3312  LEV 19:30  “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
3313  LEV 19:31  “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
3314  LEV 19:32  “‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
3315  LEV 19:33  “‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
3325  LEV 20:6  “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
3328  LEV 20:9  “‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
3329  LEV 20:10  “‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
3341  LEV 20:22  “‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
3344  LEV 20:25  “‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.
3346  LEV 20:27  “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.
3356  LEV 21:10  “‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
3376  LEV 22:6  “‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
3380  LEV 22:10  “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.
3406  LEV 23:3  “‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.
3407  LEV 23:4  “‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.
3408  LEV 23:5  “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.
3418  LEV 23:15  “‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.
3425  LEV 23:22  “‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
3440  LEV 23:37  “‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
3442  LEV 23:39  “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.
3464  LEV 24:17  “‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.
3478  LEV 25:8  “‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
3483  LEV 25:13  “‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
3488  LEV 25:18  “‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
3490  LEV 25:20  “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
3493  LEV 25:23  “‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
3495  LEV 25:25  “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
3499  LEV 25:29  “‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
3505  LEV 25:35  “‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
3509  LEV 25:39  “‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
3517  LEV 25:47  “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
3580  LEV 27:9  “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
3585  LEV 27:14  “‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
3587  LEV 27:16  “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
3593  LEV 27:22  “‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,