Wildebeest analysis examples for:   kan-kan2017   Word?’    February 25, 2023 at 00:28    Script wb_pprint_html.py   by Ulf Hermjakob

1344  GEN 44:19  ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು,
1843  EXO 12:26  ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,
1882  EXO 13:14  ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
2451  EXO 32:12  ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.
3490  LEV 25:20  “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
4460  NUM 24:13  ‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’
5705  DEU 29:23  ‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.
5918  JOS 4:6  ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ನಿಮ್ಮನ್ನು ಕೇಳುವಾಗ
6452  JOS 22:24  ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’
6758  JDG 9:2  “ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.
6765  JDG 9:9  ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು.
6767  JDG 9:11  ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
6769  JDG 9:13  ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
7271  1SA 2:29  ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’
8190  2SA 7:7  ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.
8283  2SA 11:21  ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
8439  2SA 16:10  ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
9062  1KI 9:8  ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
9505  1KI 22:22  ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
11350  2CH 7:21  ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
11566  2CH 18:19  ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
11567  2CH 18:20  ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,
13067  JOB 9:12  ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?
13074  JOB 9:19  ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.
13230  JOB 15:23  ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.
13337  JOB 20:7  ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.
13374  JOB 21:15  ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.
13387  JOB 21:28  ‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.
13929  JOB 42:3  ‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.
18008  ISA 14:10  ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.
18015  ISA 14:17  ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.
18405  ISA 36:5  ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’
18640  ISA 45:9  ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?
19040  JER 2:6  ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
19042  JER 2:8  ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
19076  JER 3:5  ‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.
19386  JER 15:2  ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.
19415  JER 16:10  ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,
19531  JER 22:8  ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,
19588  JER 23:35  ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’
19905  JER 35:13  “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.
20200  JER 49:4  ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
20758  EZK 12:9  “ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?
20789  EZK 13:12  ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”
21013  EZK 21:5  “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.
21020  EZK 21:12  ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”
21222  EZK 27:32  ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, ‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’
22397  JOL 2:17  ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”
22621  JON 2:5  ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
22788  NAM 3:7  ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು.
22927  HAG 2:3  ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
23134  ZEC 13:6  ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು.
23197  MAL 3:8  “ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
23635  MAT 13:27  ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.
23636  MAT 13:28  ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
23829  MAT 18:33  ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,
23836  MAT 19:5  ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’
23867  MAT 20:6  ಮತ್ತೊಂದು ಸಾರಿಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
23876  MAT 20:15  ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
23937  MAT 21:42  ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
23953  MAT 22:12  ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
24121  MAT 25:44  ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
24712  MRK 11:3  ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.
24768  MRK 12:26  ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
24837  MRK 14:14  ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.
25284  LUK 7:20  ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.
25545  LUK 12:17  ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,
25548  LUK 12:20  “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
25694  LUK 16:5  ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,
25696  LUK 16:7  ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
25831  LUK 19:31  ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’” ಎಂದು ಹೇಳಿಕಳುಹಿಸಿದನು.
25944  LUK 22:11  ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
26586  JHN 10:36  ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’
26800  JHN 16:5  “ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.
27211  ACT 7:26  ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
27213  ACT 7:28  ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?’ ಎಂದು ಅವನನ್ನು ನೂಕಿಬಿಟ್ಟನು.
27220  ACT 7:35  “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
27780  ACT 22:8  “‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.
27906  ACT 26:15  ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.
28262  ROM 10:6  ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
31080  REV 18:18  ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.