Wildebeest analysis examples for:   kan-kan2017   Word.’    February 25, 2023 at 00:28    Script wb_pprint_html.py   by Ulf Hermjakob

360  GEN 14:23  “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
630  GEN 24:38  ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’
2039  EXO 19:12  ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’
3243  LEV 17:7  ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’
3976  NUM 9:10  “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’
4424  NUM 23:7  ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’
4581  NUM 28:2  “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
6637  JDG 5:12  ‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’
6655  JDG 5:30  ‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’
7196  RUT 4:4  ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.
7277  1SA 2:35  ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’
8375  2SA 14:16  ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
10085  2KI 19:20  ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
11155  1CH 28:7  ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’
11303  2CH 6:16  ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.’
12202  EZR 7:24  ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’
13722  JOB 34:35  ‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’
18414  ISA 36:14  ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’
18432  ISA 37:10  “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’
18443  ISA 37:21  ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
19307  JER 11:12  ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
19414  JER 16:9  ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’
19669  JER 27:4  ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’
20334  JER 51:53  ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
20648  EZK 7:2  “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
20740  EZK 11:16  “ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’
20741  EZK 11:17  “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’
20759  EZK 12:10  ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’
20761  EZK 12:12  ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’
20788  EZK 13:11  ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’
20794  EZK 13:17  “‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’
20796  EZK 13:19  ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’
20836  EZK 16:5  ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’
20964  EZK 19:14  ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”
20992  EZK 20:28  ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’
21012  EZK 21:4  ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’
21069  EZK 22:24  “ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’
21076  EZK 22:31  ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”
21174  EZK 26:5  ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’
21355  EZK 33:6  ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’
21433  EZK 36:5  ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’
21676  EZK 44:8  ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’
21680  EZK 44:12  ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ.
21968  DAN 5:25  “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’
22828  HAB 2:11  ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’
22831  HAB 2:14  ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
22835  HAB 2:18  ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’
22929  HAG 2:5  ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
22990  ZEC 3:9  ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’
23041  ZEC 7:10  ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
23133  ZEC 13:5  ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು,
23244  MAT 2:6  “‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
23954  MAT 22:13  ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
23965  MAT 22:24  ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
24107  MAT 25:30  ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
24811  MRK 13:25  ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
25459  LUK 10:27  ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
25481  LUK 11:7  ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’
25523  LUK 11:49  ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’
26676  JHN 12:27  ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
27191  ACT 7:6  ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
27842  ACT 24:5  “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’
30811  REV 2:26  ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.
31076  REV 18:14  ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’
31078  REV 18:16  ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’