1649 | EXO 5:16 | ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು. |
4440 | NUM 23:23 | ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’ |
6648 | JDG 5:23 | ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’ |
18445 | ISA 37:23 | ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’ |
21193 | EZK 27:3 | ‘ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ತೂರೇ, ‘ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ’ ಎಂದು ನೀನು ಅಂದುಕೊಂಡಿದ್ದೀ! |
21434 | EZK 36:6 | ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’ |
22508 | AMO 5:16 | ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು. |
22823 | HAB 2:6 | “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’ |
24732 | MRK 11:23 | ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. |