59 | GEN 3:3 | ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. |
360 | GEN 14:23 | “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’ |
413 | GEN 17:15 | ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು. |
417 | GEN 17:19 | ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. |
509 | GEN 20:13 | ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು. |
599 | GEN 24:7 | ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು. |
606 | GEN 24:14 | ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು. |
630 | GEN 24:38 | ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’ |
631 | GEN 24:39 | ನಾನು ನನ್ನ ದಣಿಗೆ, ‘ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ’” ಎಂದು ಹೇಳಲು. |
635 | GEN 24:43 | ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು, |
636 | GEN 24:44 | ‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು, |
637 | GEN 24:45 | ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು. |
638 | GEN 24:46 | ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು. |
639 | GEN 24:47 | ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. |
735 | GEN 27:7 | ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ. |
828 | GEN 29:32 | ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.” |
829 | GEN 29:33 | ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.” |
882 | GEN 31:8 | ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು. |
885 | GEN 31:11 | ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ |
887 | GEN 31:13 | ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು. |
903 | GEN 31:29 | ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು. |
934 | GEN 32:6 | ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು. |
938 | GEN 32:10 | ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ, |
941 | GEN 32:13 | ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು. |
946 | GEN 32:18 | ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ, |
957 | GEN 32:29 | ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು. |
1022 | GEN 35:10 | ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. |
1294 | GEN 43:3 | ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ. |
1344 | GEN 44:19 | ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು, |
1345 | GEN 44:20 | ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು. |
1346 | GEN 44:21 | “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು, |
1347 | GEN 44:22 | ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು. |
1348 | GEN 44:23 | ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ. |
1350 | GEN 44:25 | “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ, |
1351 | GEN 44:26 | ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು. |
1354 | GEN 44:29 | ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. |
1357 | GEN 44:32 | ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ. |
1370 | GEN 45:11 | ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ. |
1379 | GEN 45:20 | ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು. |
1456 | GEN 48:4 | ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು. |
1512 | GEN 50:5 | ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು. |
1593 | EXO 3:13 | ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು. |
1625 | EXO 4:23 | ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು. |
1641 | EXO 5:8 | ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ. |
1649 | EXO 5:16 | ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು. |
1650 | EXO 5:17 | ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ. |
1664 | EXO 6:8 | ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು. |
1695 | EXO 7:9 | “ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು. |
1704 | EXO 7:18 | ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು. |
1705 | EXO 7:19 | ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು. |
1715 | EXO 7:29 | ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು. |
1727 | EXO 8:12 | ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು. |
1734 | EXO 8:19 | ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು. |
1747 | EXO 9:4 | ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು. |
1762 | EXO 9:19 | ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’” ಎಂದು ಹೇಳಿದನು. |
1784 | EXO 10:6 | ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ’” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು. |
1814 | EXO 11:7 | ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’ |
1815 | EXO 11:8 | ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. |
1837 | EXO 12:20 | ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’” ಎಂದು ಆಜ್ಞಾಪಿಸಿದನು. |
1843 | EXO 12:26 | ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ, |
1844 | EXO 12:27 | ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು. |
1882 | EXO 13:14 | ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು. |
1883 | EXO 13:15 | ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು. |
1893 | EXO 14:3 | ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು. |
1894 | EXO 14:4 | ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು. |
1902 | EXO 14:12 | ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು. |
1930 | EXO 15:9 | ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು. |
1957 | EXO 16:9 | ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು. |
1960 | EXO 16:12 | “ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ. |
1971 | EXO 16:23 | ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು. |
1980 | EXO 16:32 | ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು. |
2033 | EXO 19:6 | ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು. |
2039 | EXO 19:12 | ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’ |
2050 | EXO 19:23 | ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು. |
2054 | EXO 20:2 | “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’ |
2078 | EXO 20:26 | ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು. |
2082 | EXO 21:4 | ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’” |
2447 | EXO 32:8 | ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು. |
2451 | EXO 32:12 | ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ. |
2452 | EXO 32:13 | ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು. |
2462 | EXO 32:23 | ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು. |
2463 | EXO 32:24 | ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು. |
2466 | EXO 32:27 | ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು. |
2475 | EXO 33:1 | ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು. |
2479 | EXO 33:5 | ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು. |
2486 | EXO 33:12 | ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ. |
2796 | LEV 3:17 | ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು. |
2844 | LEV 5:13 | ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’” |
2868 | LEV 6:11 | ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು. |
2901 | LEV 7:21 | ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು. |
2907 | LEV 7:27 | ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು. |
2914 | LEV 7:34 | ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು. |
2949 | LEV 8:31 | ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ. |
2958 | LEV 9:4 | ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು. |
2981 | LEV 10:3 | ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು. |
3045 | LEV 11:47 | ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’” |
3053 | LEV 12:8 | ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ. |
3098 | LEV 13:45 | “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು. |
3147 | LEV 14:35 | ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು. |
3202 | LEV 15:33 | ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’” ಎಂದು ಹೇಳಿದನು. |