5 | GEN 1:5 | ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. |
6 | GEN 1:6 | ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. |
8 | GEN 1:8 | ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. |
12 | GEN 1:12 | ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು |
13 | GEN 1:13 | ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. |
14 | GEN 1:14 | ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. |
16 | GEN 1:16 | ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. |
19 | GEN 1:19 | ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು. |
21 | GEN 1:21 | ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
23 | GEN 1:23 | ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. |
24 | GEN 1:24 | ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. |
25 | GEN 1:25 | ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
26 | GEN 1:26 | ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. |
27 | GEN 1:27 | ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” |
31 | GEN 1:31 | ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು. |
36 | GEN 2:5 | ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. |
37 | GEN 2:6 | ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು. |
39 | GEN 2:8 | ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. |
40 | GEN 2:9 | ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. |
41 | GEN 2:10 | ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. |
49 | GEN 2:18 | ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. |
54 | GEN 2:23 | “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. |
57 | GEN 3:1 | ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. |
62 | GEN 3:6 | ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. |
63 | GEN 3:7 | ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು. |
69 | GEN 3:13 | ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. |
80 | GEN 3:24 | ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು. |
89 | GEN 4:9 | ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು. |
108 | GEN 5:2 | ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. |
144 | GEN 6:6 | ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು. |
153 | GEN 6:15 | ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. |
157 | GEN 6:19 | ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು. |
163 | GEN 7:3 | ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು. |
182 | GEN 7:22 | ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು. |
183 | GEN 7:23 | ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು. |
212 | GEN 9:6 | ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು. |
225 | GEN 9:19 | ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು. |
270 | GEN 11:3 | “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. |
273 | GEN 11:6 | ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. |
311 | GEN 12:12 | ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು. |
314 | GEN 12:15 | ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು. |
316 | GEN 12:17 | ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು. |
333 | GEN 13:14 | ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು. |
347 | GEN 14:10 | ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು. |
352 | GEN 14:15 | ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು. |
353 | GEN 14:16 | ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು. |
376 | GEN 15:15 | ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ. |
378 | GEN 15:17 | ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು. |
404 | GEN 17:6 | ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. |
409 | GEN 17:11 | ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ. |
412 | GEN 17:14 | ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು. |
414 | GEN 17:16 | ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು. |
433 | GEN 18:8 | ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು. |
443 | GEN 18:18 | ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ; |
449 | GEN 18:24 | ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? |
451 | GEN 18:26 | ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು. |
456 | GEN 18:31 | ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು. |
457 | GEN 18:32 | ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು. |
473 | GEN 19:15 | ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು. |
475 | GEN 19:17 | ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು. |
477 | GEN 19:19 | ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು. |
478 | GEN 19:20 | ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು. |
481 | GEN 19:23 | ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು. |
484 | GEN 19:26 | ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು. |
506 | GEN 20:10 | “ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು. |
555 | GEN 22:7 | ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ, |
572 | GEN 22:24 | ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು. |
578 | GEN 23:6 | “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು |
616 | GEN 24:24 | ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು. |
617 | GEN 24:25 | ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು. |
642 | GEN 24:50 | ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; |
646 | GEN 24:54 | ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು. |
665 | GEN 25:6 | ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು. |
670 | GEN 25:11 | ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು. |
712 | GEN 26:19 | ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು. |
723 | GEN 26:30 | ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು. |
728 | GEN 26:35 | ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು. |
757 | GEN 27:29 | ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು. |
764 | GEN 27:36 | ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು, |
785 | GEN 28:11 | ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. |
788 | GEN 28:14 | ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು. |
794 | GEN 28:20 | ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು, |
799 | GEN 29:3 | ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು. |
831 | GEN 29:35 | ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು. |
886 | GEN 31:12 | ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ. |
890 | GEN 31:16 | ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು. |
893 | GEN 31:19 | ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು. |
936 | GEN 32:8 | ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು. |
941 | GEN 32:13 | ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು. |
947 | GEN 32:19 | ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು. |
950 | GEN 32:22 | ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು. |
959 | GEN 32:31 | ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು, |
972 | GEN 33:11 | ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು. |