47 | GEN 2:16 | ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. |
1149 | GEN 38:29 | ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೆಚ್” ಎಂದು ಹೆಸರಾಯಿತು. |
1626 | EXO 4:24 | ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು. |
2230 | EXO 25:34 | ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು. |
2417 | EXO 30:34 | ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು, |
2465 | EXO 32:26 | ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು. |
2634 | EXO 37:29 | ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು. |
2896 | LEV 7:16 | “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು. |
3454 | LEV 24:7 | ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು. |
5503 | DEU 23:2 | ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು. |
6627 | JDG 5:2 | “ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ. |
6634 | JDG 5:9 | ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ. |
7259 | 1SA 2:17 | ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು. |
7540 | 1SA 14:30 | ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ” ಅಂದನು. |
7833 | 1SA 23:20 | ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು” ಎಂದು ಹೇಳಿದರು. |
9187 | 1KI 12:33 | ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು. |
9858 | 2KI 12:5 | ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು, |
11016 | 1CH 23:28 | ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ, |
11175 | 1CH 29:6 | ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ |
11178 | 1CH 29:9 | ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು. |
11183 | 1CH 29:14 | ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು. |
11186 | 1CH 29:17 | ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ. |
11272 | 2CH 4:21 | ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು. |
11544 | 2CH 17:16 | ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ; |
11827 | 2CH 29:31 | ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. |
11873 | 2CH 31:14 | ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು. |
12107 | EZR 3:5 | ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು. |
12147 | EZR 5:8 | ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ. |
12194 | EZR 7:16 | ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ. |
12594 | NEH 11:2 | ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು. |
13252 | JOB 16:10 | ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ನನ್ನನ್ನು ಅಣಕಿಸಿ ಛೀಮಾರಿ ಹಾಕಿ, ನನ್ನ ದವಡೆಯ ಮೇಲೆ ಬಡಿದಿದ್ದಾರೆ. |
13508 | JOB 27:23 | ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.” |
14974 | PSA 68:22 | ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು. |
15117 | PSA 74:14 | ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು. |
15244 | PSA 79:1 | ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು. |
15249 | PSA 79:6 | ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು. |
15253 | PSA 79:10 | ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ. |
15401 | PSA 89:11 | ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ. |
15860 | PSA 110:6 | ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು. |
16204 | PSA 129:4 | ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. |
16972 | PRO 18:1 | ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು. |
17624 | SNG 1:17 | ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ. |
18333 | ISA 32:4 | ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು. |
18545 | ISA 41:24 | ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ! |
18658 | ISA 46:2 | ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು. |
18752 | ISA 51:9 | ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ? |
18869 | ISA 58:13 | ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ, |
19308 | JER 11:13 | ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು. |
19403 | JER 15:19 | ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ. |
20332 | JER 51:51 | ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ? |
20382 | LAM 1:3 | ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು. |
20389 | LAM 1:10 | ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು. |
20390 | LAM 1:11 | ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ. |
20412 | LAM 2:11 | ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ. |
20413 | LAM 2:12 | ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ. |
20416 | LAM 2:15 | ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ. |
20417 | LAM 2:16 | ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ. |
20420 | LAM 2:19 | ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.” |
21052 | EZK 22:7 | ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ. |
21159 | EZK 25:7 | ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” |
21233 | EZK 28:7 | ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು. |
21443 | EZK 36:15 | ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. |
21621 | EZK 41:26 | ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು. |
21675 | EZK 44:7 | ‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ. |
21676 | EZK 44:8 | ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’ |
21677 | EZK 44:9 | ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು. |
21736 | EZK 46:12 | ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು. |
22057 | DAN 8:27 | ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ. |
22083 | DAN 9:26 | ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು. |
22121 | DAN 11:16 | ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು. |
22141 | DAN 11:36 | “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು. |
22513 | AMO 5:21 | “ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ. |
22563 | AMO 8:13 | ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು. |
22590 | OBA 1:11 | ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ. |
22645 | JON 4:8 | ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು. |
22739 | MIC 7:6 | ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. |
23294 | MAT 4:16 | ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು. |
23302 | MAT 4:24 | ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು. |
23334 | MAT 5:31 | ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. |
23555 | MAT 11:27 | ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. |
23676 | MAT 14:10 | ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ, |
23784 | MAT 17:15 | “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ. |
23838 | MAT 19:7 | ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು. |
24333 | MRK 2:4 | ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. |
24492 | MRK 6:16 | ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು. |
24536 | MRK 7:4 | ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು. |
24661 | MRK 10:4 | ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. |
24826 | MRK 14:3 | ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. |
25049 | LUK 2:7 | ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. |
25379 | LUK 9:9 | ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು. |
25466 | LUK 10:34 | ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. |
25467 | LUK 10:35 | ಮರುದಿನ ಅವನು ಎರಡು ದಿನಾರಿಗಳನ್ನುತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು. |
26126 | JHN 1:13 | ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. |
26652 | JHN 12:3 | ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು. |
27574 | ACT 16:22 | ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು. |
27982 | ACT 28:15 | ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು. |
28204 | ROM 8:20 | ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ, |
28566 | 1CO 7:11 | ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು. |
29110 | 2CO 12:20 | ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು. |