21 | GEN 1:21 | ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
34 | GEN 2:3 | ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. |
36 | GEN 2:5 | ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. |
40 | GEN 2:9 | ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. |
43 | GEN 2:12 | ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ. |
59 | GEN 3:3 | ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. |
61 | GEN 3:5 | ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು. |
72 | GEN 3:16 | ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
80 | GEN 3:24 | ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು. |
93 | GEN 4:13 | ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ. |
96 | GEN 4:16 | ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು. |
102 | GEN 4:22 | ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ. |
106 | GEN 4:26 | ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು. |
141 | GEN 6:3 | ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು. |
142 | GEN 6:4 | ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು. |
153 | GEN 6:15 | ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. |
159 | GEN 6:21 | ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು. |
162 | GEN 7:2 | ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು. |
168 | GEN 7:8 | ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ |
179 | GEN 7:19 | ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು. |
201 | GEN 8:17 | ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. |
204 | GEN 8:20 | ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು. |
208 | GEN 9:2 | ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ. |
213 | GEN 9:7 | ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. |
247 | GEN 10:12 | ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ. |
273 | GEN 11:6 | ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. |
300 | GEN 12:1 | ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು. |
301 | GEN 12:2 | ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ. |
307 | GEN 12:8 | ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ |
316 | GEN 12:17 | ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು. |
323 | GEN 13:4 | ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ |
326 | GEN 13:7 | ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು. |
335 | GEN 13:16 | ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು. |
339 | GEN 14:2 | ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು. |
341 | GEN 14:4 | ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು. |
346 | GEN 14:9 | ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. |
351 | GEN 14:14 | ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು. |
362 | GEN 15:1 | ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.” |
364 | GEN 15:3 | ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು. |
365 | GEN 15:4 | ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು, |
368 | GEN 15:7 | ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು. |
369 | GEN 15:8 | “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು. |
374 | GEN 15:13 | ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು. |
376 | GEN 15:15 | ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ. |
377 | GEN 15:16 | ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು. |
378 | GEN 15:17 | ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು. |
388 | GEN 16:6 | ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು. |
391 | GEN 16:9 | ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು. |
396 | GEN 16:14 | ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. |
400 | GEN 17:2 | ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು. |
404 | GEN 17:6 | ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. |
415 | GEN 17:17 | ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು. |
418 | GEN 17:20 | ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು. |
436 | GEN 18:11 | ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. |
439 | GEN 18:14 | ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು. |
444 | GEN 18:19 | ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು. |
452 | GEN 18:27 | ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ; |
456 | GEN 18:31 | ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು. |
467 | GEN 19:9 | ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು. |
482 | GEN 19:24 | ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ |
485 | GEN 19:27 | ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ |
489 | GEN 19:31 | ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ; |
496 | GEN 19:38 | ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು. |
501 | GEN 20:5 | ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು. |
502 | GEN 20:6 | ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. |
521 | GEN 21:7 | ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. |
524 | GEN 21:10 | ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು. |
536 | GEN 21:22 | ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ. |
539 | GEN 21:25 | ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು, |
546 | GEN 21:32 | ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು. |
547 | GEN 21:33 | ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು. |
553 | GEN 22:5 | “ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು. |
562 | GEN 22:14 | ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. |
565 | GEN 22:17 | ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. |
566 | GEN 22:18 | ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು. |
576 | GEN 23:4 | “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು. |
578 | GEN 23:6 | “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು |
580 | GEN 23:8 | ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ, |
581 | GEN 23:9 | ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು. |
583 | GEN 23:11 | “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು” |
585 | GEN 23:13 | ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು. |
587 | GEN 23:15 | “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು. |
593 | GEN 24:1 | ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು. |
596 | GEN 24:4 | ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. |