11 | GEN 1:11 | ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. |
45 | GEN 2:14 | ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ. |
73 | GEN 3:17 | ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
92 | GEN 4:12 | ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು. |
93 | GEN 4:13 | ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ. |
138 | GEN 5:32 | ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು. |
142 | GEN 6:4 | ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು. |
148 | GEN 6:10 | ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು. |
173 | GEN 7:13 | ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು. |
224 | GEN 9:18 | ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು. |
228 | GEN 9:22 | ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು. |
229 | GEN 9:23 | ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ. |
233 | GEN 9:27 | ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು. |
236 | GEN 10:1 | ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. |
237 | GEN 10:2 | ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು. |
238 | GEN 10:3 | ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು. |
240 | GEN 10:5 | ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು. |
248 | GEN 10:13 | ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು. |
249 | GEN 10:14 | ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು. |
256 | GEN 10:21 | ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು. |
263 | GEN 10:28 | ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು. |
264 | GEN 10:29 | ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು. |
265 | GEN 10:30 | ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು. |
314 | GEN 12:15 | ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು. |
316 | GEN 12:17 | ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು. |
317 | GEN 12:18 | ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? |
319 | GEN 12:20 | ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು. |
338 | GEN 14:1 | ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, |
342 | GEN 14:5 | ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು. |
346 | GEN 14:9 | ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. |
379 | GEN 15:18 | ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ. |
381 | GEN 15:20 | ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ, |
536 | GEN 21:22 | ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ. |
546 | GEN 21:32 | ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು. |
548 | GEN 21:34 | ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು. |
570 | GEN 22:22 | ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರೇ. |
580 | GEN 23:8 | ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ, |
582 | GEN 23:10 | ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ, |
585 | GEN 23:13 | ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು. |
586 | GEN 23:14 | ಅದಕ್ಕೆ ಎಫ್ರೋನನು ಅಬ್ರಹಾಮನಿಗೆ, |
588 | GEN 23:16 | ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು. |
589 | GEN 23:17 | ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ, |
604 | GEN 24:12 | “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ. |
613 | GEN 24:21 | ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು. |
634 | GEN 24:42 | ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ |
648 | GEN 24:56 | ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು. |
663 | GEN 25:4 | ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. |
668 | GEN 25:9 | ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ. |
674 | GEN 25:15 | ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ. |
694 | GEN 26:1 | ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು. |
701 | GEN 26:8 | ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು. |
707 | GEN 26:14 | ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು. |
708 | GEN 26:15 | ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು. |
711 | GEN 26:18 | ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು. |
719 | GEN 26:26 | ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು. |
839 | GEN 30:8 | ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು. |
849 | GEN 30:18 | ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು. |
855 | GEN 30:24 | ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು. |
856 | GEN 30:25 | ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು. |
895 | GEN 31:21 | ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು. |
963 | GEN 33:2 | ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು. |
968 | GEN 33:7 | ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು. |
1028 | GEN 35:16 | ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು. |
1031 | GEN 35:19 | ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು. |
1036 | GEN 35:24 | ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು. |
1037 | GEN 35:25 | ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ. |
1045 | GEN 36:4 | ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು. |
1051 | GEN 36:10 | ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು. |
1052 | GEN 36:11 | ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್, |
1053 | GEN 36:12 | ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು. |
1056 | GEN 36:15 | ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್, |
1057 | GEN 36:16 | ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು. |
1064 | GEN 36:23 | ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್. |
1086 | GEN 37:2 | ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು. |
1087 | GEN 37:3 | ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು. |
1088 | GEN 37:4 | ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು. |
1089 | GEN 37:5 | ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. |
1095 | GEN 37:11 | ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು. |
1097 | GEN 37:13 | ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು. |
1098 | GEN 37:14 | ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು. |
1101 | GEN 37:17 | ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು. |
1107 | GEN 37:23 | ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು. |
1112 | GEN 37:28 | ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು. |
1113 | GEN 37:29 | ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು. |
1115 | GEN 37:31 | ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ, |
1117 | GEN 37:33 | ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು. |
1120 | GEN 37:36 | ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು. |
1151 | GEN 39:1 | ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು. |