| 1 | GEN 1:1 | ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. |
| 2 | GEN 1:2 | ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು. |
| 3 | GEN 1:3 | ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು. |
| 5 | GEN 1:5 | ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. |
| 6 | GEN 1:6 | ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು. |
| 7 | GEN 1:7 | ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು. |
| 8 | GEN 1:8 | ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. |
| 9 | GEN 1:9 | ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. |
| 10 | GEN 1:10 | ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು. |
| 11 | GEN 1:11 | ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. |
| 12 | GEN 1:12 | ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು |
| 13 | GEN 1:13 | ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. |
| 14 | GEN 1:14 | ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. |
| 16 | GEN 1:16 | ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು. |
| 17 | GEN 1:17 | ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ |
| 18 | GEN 1:18 | ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು. |
| 19 | GEN 1:19 | ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು. |
| 20 | GEN 1:20 | ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. |
| 21 | GEN 1:21 | ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
| 22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
| 23 | GEN 1:23 | ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. |
| 24 | GEN 1:24 | ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. |
| 25 | GEN 1:25 | ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
| 26 | GEN 1:26 | ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. |
| 27 | GEN 1:27 | ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” |
| 28 | GEN 1:28 | ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು. |
| 29 | GEN 1:29 | ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ |
| 30 | GEN 1:30 | ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. |
| 31 | GEN 1:31 | ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು. |
| 32 | GEN 2:1 | ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. |
| 33 | GEN 2:2 | ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. |
| 34 | GEN 2:3 | ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. |
| 36 | GEN 2:5 | ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. |
| 37 | GEN 2:6 | ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು. |
| 38 | GEN 2:7 | ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು. |
| 39 | GEN 2:8 | ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. |
| 40 | GEN 2:9 | ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. |
| 41 | GEN 2:10 | ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. |
| 42 | GEN 2:11 | ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. |
| 43 | GEN 2:12 | ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ. |
| 44 | GEN 2:13 | ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. |
| 45 | GEN 2:14 | ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ. |
| 46 | GEN 2:15 | ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು. |
| 48 | GEN 2:17 | ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು. |
| 49 | GEN 2:18 | ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. |
| 50 | GEN 2:19 | ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. |
| 51 | GEN 2:20 | ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ. |
| 52 | GEN 2:21 | ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. |
| 53 | GEN 2:22 | ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ, |
| 54 | GEN 2:23 | “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. |