1 | GEN 1:1 | ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. |
22 | GEN 1:22 | ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. |
24 | GEN 1:24 | ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. |
25 | GEN 1:25 | ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. |
27 | GEN 1:27 | ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” |
30 | GEN 1:30 | ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. |
33 | GEN 2:2 | ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. |
34 | GEN 2:3 | ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. |
38 | GEN 2:7 | ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು. |
39 | GEN 2:8 | ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. |
40 | GEN 2:9 | ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. |
50 | GEN 2:19 | ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. |
51 | GEN 2:20 | ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ. |
57 | GEN 3:1 | ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. |
70 | GEN 3:14 | ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
79 | GEN 3:23 | ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು. |
80 | GEN 3:24 | ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು. |
107 | GEN 5:1 | ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು. |
108 | GEN 5:2 | ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು. |
143 | GEN 6:5 | ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು. |
144 | GEN 6:6 | ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು. |
145 | GEN 6:7 | ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು. |
149 | GEN 6:11 | ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು. |
158 | GEN 6:20 | ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು. |
164 | GEN 7:4 | ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು. |
174 | GEN 7:14 | ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ |
181 | GEN 7:21 | ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. |
185 | GEN 8:1 | ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು. |
201 | GEN 8:17 | ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು. |
203 | GEN 8:19 | ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು. |
205 | GEN 8:21 | ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. |
208 | GEN 9:2 | ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ. |
211 | GEN 9:5 | ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ? |
213 | GEN 9:7 | ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. |
216 | GEN 9:10 | ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. |
244 | GEN 10:9 | ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು. |
277 | GEN 11:10 | ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು. |
305 | GEN 12:6 | ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. |
332 | GEN 13:13 | ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು. |
371 | GEN 15:10 | ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ. |
376 | GEN 15:15 | ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ. |
403 | GEN 17:5 | ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು. |
418 | GEN 17:20 | ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು. |
428 | GEN 18:3 | “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ. |
436 | GEN 18:11 | ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. |
547 | GEN 21:33 | ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು. |
592 | GEN 23:20 | ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು. |
593 | GEN 24:1 | ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು. |
613 | GEN 24:21 | ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು. |
627 | GEN 24:35 | ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು. |
628 | GEN 24:36 | ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ. |
696 | GEN 26:3 | ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು, |
705 | GEN 26:12 | ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು; |
715 | GEN 26:22 | ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು. |
858 | GEN 30:27 | ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ. |
860 | GEN 30:29 | ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ. |
861 | GEN 30:30 | ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು. |
913 | GEN 31:39 | ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ. |
941 | GEN 32:13 | ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು. |
966 | GEN 33:5 | ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು. |
972 | GEN 33:11 | ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು. |
1104 | GEN 37:20 | ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. |
1117 | GEN 37:33 | ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು. |
1127 | GEN 38:7 | ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು. |
1130 | GEN 38:10 | ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು. |
1134 | GEN 38:14 | ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು. |
1152 | GEN 39:2 | ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು. |
1155 | GEN 39:5 | ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು. |
1227 | GEN 41:31 | ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು. |
1248 | GEN 41:52 | ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು. |
1307 | GEN 43:16 | ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು. |
1308 | GEN 43:17 | ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು. |
1310 | GEN 43:19 | ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ, |
1326 | GEN 44:1 | ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ. |
1327 | GEN 44:2 | ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು. |
1329 | GEN 44:4 | ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ? |
1331 | GEN 44:6 | ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ, ಅವರಿಗೆ ಈ ಮಾತುಗಳನ್ನು ಹೇಳಿದನು. |
1332 | GEN 44:7 | ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ. |
1340 | GEN 44:15 | ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು, |
1341 | GEN 44:16 | ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು. |
1353 | GEN 44:28 | ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ. |
1417 | GEN 46:30 | ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು. |
1450 | GEN 47:29 | ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ. |
1451 | GEN 47:30 | ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು. |
1456 | GEN 48:4 | ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು. |
1462 | GEN 48:10 | ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. |
1480 | GEN 49:6 | ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು. |
1483 | GEN 49:9 | ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು? |
1485 | GEN 49:11 | ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು. |
1486 | GEN 49:12 | ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು. |
1494 | GEN 49:20 | ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು. |