Wildebeest analysis examples for:   kan-kan2017   “Word,    February 11, 2023 at 18:50    Script wb_pprint_html.py   by Ulf Hermjakob

29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
89  GEN 4:9  ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
103  GEN 4:23  ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
200  GEN 8:16  “ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;
271  GEN 11:4  ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
300  GEN 12:1  ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.
310  GEN 12:11  ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;
362  GEN 15:1  ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
428  GEN 18:3  “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
434  GEN 18:9  ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.
440  GEN 18:15  ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.
452  GEN 18:27  ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
455  GEN 18:30  ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
456  GEN 18:31  ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
457  GEN 18:32  ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
460  GEN 19:2  “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
465  GEN 19:7  “ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.
472  GEN 19:14  ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
475  GEN 19:17  ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
476  GEN 19:18  ಅದಕ್ಕೆ ಲೋಟನು, “ಕರ್ತನೇ, ಅದು ನನ್ನಿಂದಾಗದು;
500  GEN 20:4  ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, “ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ?
502  GEN 20:6  ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
511  GEN 20:15  “ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು.
531  GEN 21:17  ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;
550  GEN 22:2  ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.
555  GEN 22:7  ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ,
556  GEN 22:8  ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.
559  GEN 22:11  ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.
578  GEN 23:6  “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು
587  GEN 23:15  “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.
609  GEN 24:17  ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು.
652  GEN 24:60  ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.
741  GEN 27:13  ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
749  GEN 27:21  ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು.
754  GEN 27:26  ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, “ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು” ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು.
755  GEN 27:27  ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.
759  GEN 27:31  ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.
762  GEN 27:34  ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು,
766  GEN 27:38  ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು,
770  GEN 27:42  ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.
800  GEN 29:4  ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.
846  GEN 30:15  ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.
865  GEN 30:34  ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು.
909  GEN 31:35  ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
938  GEN 32:10  ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
970  GEN 33:9  ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,
971  GEN 33:10  ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
1097  GEN 37:13  ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.
1114  GEN 37:30  ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು.
1146  GEN 38:26  ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.
1164  GEN 39:14  ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.
1205  GEN 41:9  ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
1265  GEN 42:12  ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.
1286  GEN 42:33  ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
1302  GEN 43:11  ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
1311  GEN 43:20  “ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.
1320  GEN 43:29  ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.
1335  GEN 44:10  ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ,
1389  GEN 46:2  ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.
1470  GEN 48:18  ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು.
1526  GEN 50:19  ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?
1568  EXO 2:13  ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು.
1584  EXO 3:4  ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.
1612  EXO 4:10  ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
1615  EXO 4:13  ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.
1655  EXO 5:22  ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?
1668  EXO 6:12  ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.
1686  EXO 6:30  ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.
1744  EXO 9:1  ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.
1838  EXO 12:21  ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, “ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.
1885  EXO 13:17  ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
2036  EXO 19:9  ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
2072  EXO 20:20  ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
2179  EXO 24:1  ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
2423  EXO 31:2  “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
2440  EXO 32:1  ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.
2461  EXO 32:22  ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?
2495  EXO 33:21  ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.
2506  EXO 34:9  “ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.
2507  EXO 34:10  ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
2562  EXO 35:30  ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.
3397  LEV 22:27  “ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.
3795  NUM 5:2  “ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
4024  NUM 10:35  ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
4025  NUM 10:36  ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.
4053  NUM 11:28  ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
4073  NUM 12:13  ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.
4217  NUM 16:22  ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
4322  NUM 20:10  ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”
4358  NUM 21:17  ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
4414  NUM 22:38  ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.
4435  NUM 23:18  ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
4692  NUM 31:26  “ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,
4723  NUM 32:3  “ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,
4749  NUM 32:29  ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.
4923  DEU 1:29  ಅದಕ್ಕೆ ನಾನು, “ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.
5003  DEU 3:26  ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.
5056  DEU 5:1  ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
5432  DEU 20:3  “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.