Wildebeest analysis examples for:   kan-kan2017   Word,Word    February 11, 2023 at 18:50    Script wb_pprint_html.py   by Ulf Hermjakob

23321  MAT 5:18  ನಿಮಗೆ ಸತ್ಯವಾಗಿ ಹೇಳುತ್ತೇನೆ,ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
23461  MAT 9:13  ನೀವು ಹೋಗಿ, ‘ನಾನು ಯಜ್ಞವನ್ನಲ್ಲ,ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
23547  MAT 11:19  ಮನುಷ್ಯಕುಮಾರನು ಬಂದನು,ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
23638  MAT 13:30  ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ,ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.
26160  JHN 1:47  ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ,ಇವನು ನಿಜವಾದ ಇಸ್ರಾಯೇಲನು,ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.
26202  JHN 3:13  ಪರಲೋಕದಿಂದ ಇಳಿದು ಬಂದವನೇ, ಅಂದರೆ,ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
26419  JHN 7:22  ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ,ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
26732  JHN 13:33  ನನ್ನ ಮಕ್ಕಳೇ,ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
26818  JHN 16:23  ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ,ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
26833  JHN 17:5  ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.
26839  JHN 17:11  ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
26852  JHN 17:24  ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
26854  JHN 17:26  ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.
26965  JHN 20:29  ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ,ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
26982  JHN 21:15  ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ,ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
29099  2CO 12:9  ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು,ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
30786  REV 2:1  “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡುಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,
30793  REV 2:8  “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು,ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂಹೇಳುವುದೇನಂದರೆ,
30795  REV 2:10  ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು.
30797  REV 2:12  “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ,ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,
30800  REV 2:15  ಹಾಗೆಯೇ,ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.
30803  REV 2:18  “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ,ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,
30805  REV 2:20  ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.
30806  REV 2:21  ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.
30811  REV 2:26  ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ,ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.
30815  REV 3:1  “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ,ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು.ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ.
30819  REV 3:5  ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
30821  REV 3:7  “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,ಪರಿಶುದ್ಧನೂ,ಸತ್ಯವಂತನೂ,ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
30824  REV 3:10  ಸೈರಣೆಯಿಂದಿರಬೇಕೆಂಬನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
30825  REV 3:11  ನಾನುಬೇಗನೇ ಬರುತ್ತೇನೆ,ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
30826  REV 3:12  ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು.ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
30828  REV 3:14  “ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ,ದೇವರ ಸೃಷ್ಟಿಗೆ ಮೂಲನೂ ಆಗಿರುವ‘ಆಮೆನ್’ ಎಂಬಾತನುಹೇಳುವುದೇನಂದರೆ,
30832  REV 3:18  ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.
30837  REV 4:1  ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ,ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.