7256 | 1SA 2:14 | ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು. |
8113 | 2SA 3:29 | ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು. |
26227 | JHN 4:2 | (ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು), |