|
6357 | ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ. | |
28876 | ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು. | |
29435 | ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ. |