9879 | 2KI 13:4 | ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ, |
9973 | 2KI 16:6 | ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ. |
11638 | 2CH 21:9 | ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. |
11823 | 2CH 29:27 | ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು. |
11847 | 2CH 30:15 | ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು. |
11908 | 2CH 32:28 | ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು. |
23512 | MAT 10:26 | ಆದರೂ ಅವರಿಗೆ ಹೆದರಬೇಡಿರಿ.ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ. |
23547 | MAT 11:19 | ಮನುಷ್ಯಕುಮಾರನು ಬಂದನು,ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು. |
23625 | MAT 13:17 | ನಿಮಗೆ ಸತ್ಯವಾಗಿ ಹೇಳುತ್ತೇನೆ.ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. |
23760 | MAT 16:19 | ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು.ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು. |
23789 | MAT 17:20 | ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ, |
23848 | MAT 19:17 | ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು. |
24416 | MRK 4:24 | ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ.ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. |
24695 | MRK 10:38 | ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು.ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ?ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು. |
26164 | JHN 1:51 | ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. |
26579 | JHN 10:29 | ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು.ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. |
26680 | JHN 12:31 | ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು |
26748 | JHN 14:11 | ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. |
26815 | JHN 16:20 | ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆನಿಮ್ಮ ದುಃಖವು ಹೋಗಿ ಆನಂದ ಬರುವುದು. |
26827 | JHN 16:32 | ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ.ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ. |
26828 | JHN 16:33 | ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು. |
26840 | JHN 17:12 | ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. |
26865 | JHN 18:11 | ಆಗ ಯೇಸು ಪೇತ್ರನಿಗೆ, “ಕತ್ತಿಯನ್ನುಒರೆಯಲ್ಲಿ ಹಾಕು.ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು. |
30783 | REV 1:18 | ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. |
30789 | REV 2:4 | ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ.ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. |
30792 | REV 2:7 | ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು. |
30795 | REV 2:10 | ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು. |
30796 | REV 2:11 | ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. |
30798 | REV 2:13 | ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ. |
30799 | REV 2:14 | ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. |
30802 | REV 2:17 | ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು.ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು. |
30805 | REV 2:20 | ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ. |
30808 | REV 2:23 | ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು. |
30815 | REV 3:1 | “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ,ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು.ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ. |
30819 | REV 3:5 | ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು. |
30826 | REV 3:12 | ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು.ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. |
30834 | REV 3:20 | ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು. |
31038 | REV 16:15 | “ಇಗೋಕಳ್ಳನು ಬರುವಂತೆ ಬರುತ್ತೇನೆ.ತಾನುಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.” |
31161 | REV 22:12 | “ನೋಡು! ನಾನು ಬೇಗನೇ ಬರುತ್ತೇನೆ.ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ. |
31163 | REV 22:14 | “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು.ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು. |