67 | GEN 3:11 | ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. |
78 | GEN 3:22 | ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. |
86 | GEN 4:6 | ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? |
87 | GEN 4:7 | ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. |
90 | GEN 4:10 | ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. |
211 | GEN 9:5 | ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ? |
317 | GEN 12:18 | ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? |
318 | GEN 12:19 | ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ, |
363 | GEN 15:2 | ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು. |
390 | GEN 16:8 | “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. |
415 | GEN 17:17 | ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು. |
438 | GEN 18:13 | ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು? |
439 | GEN 18:14 | ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು. |
442 | GEN 18:17 | ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ? |
448 | GEN 18:23 | ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ? |
449 | GEN 18:24 | ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? |
463 | GEN 19:5 | ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು. |
470 | GEN 19:12 | ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ. |
500 | GEN 20:4 | ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, “ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ? |
505 | GEN 20:9 | ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ, |
521 | GEN 21:7 | ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. |
531 | GEN 21:17 | ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು; |
587 | GEN 23:15 | “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು. |
614 | GEN 24:22 | ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು. |
623 | GEN 24:31 | ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು. |
703 | GEN 26:10 | ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?” |
764 | GEN 27:36 | ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು, |
766 | GEN 27:38 | ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು, |
811 | GEN 29:15 | ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು. |
821 | GEN 29:25 | ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ, |
846 | GEN 30:15 | ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು. |
888 | GEN 31:14 | ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ? |
900 | GEN 31:26 | ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ. |
901 | GEN 31:27 | ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು. |
910 | GEN 31:36 | ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು? |
911 | GEN 31:37 | ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ. |
917 | GEN 31:43 | ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ? |
946 | GEN 32:18 | ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ, |
976 | GEN 33:15 | ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು. |
1004 | GEN 34:23 | ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು. |
1092 | GEN 37:8 | ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು. |
1094 | GEN 37:10 | ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು. |
1104 | GEN 37:20 | ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. |
1110 | GEN 37:26 | ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು? |
1181 | GEN 40:8 | ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು. |
1298 | GEN 43:7 | ಅವರು, “ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು” ಎಂದರು. |
1318 | GEN 43:27 | ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು. |
1329 | GEN 44:4 | ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ? |
1330 | GEN 44:5 | ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು. |
1332 | GEN 44:7 | ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ. |
1333 | GEN 44:8 | ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು? |
1340 | GEN 44:15 | ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು, |
1341 | GEN 44:16 | ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು. |
1359 | GEN 44:34 | ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು. |
1483 | GEN 49:9 | ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು? |
1526 | GEN 50:19 | ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ? |
1551 | EXO 1:18 | ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು. |
1569 | EXO 2:14 | ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು. |
1575 | EXO 2:20 | ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು. |
1593 | EXO 3:13 | ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು. |
1613 | EXO 4:11 | ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ? |
1616 | EXO 4:14 | ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು. |
1635 | EXO 5:2 | ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು. |
1637 | EXO 5:4 | ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು. |
1648 | EXO 5:15 | ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ? |
1655 | EXO 5:22 | ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ? |
1720 | EXO 8:5 | ಅದಕ್ಕೆ ಮೋಶೆ ಫರೋಹನಿಗೆ, “ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು” ಎಂದು ಫರೋಹನನ್ನು ವಿನಂತಿಸಿಕೊಂಡನು. |
1737 | EXO 8:22 | ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ? |
1760 | EXO 9:17 | ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? |
1781 | EXO 10:3 | ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು. |
1895 | EXO 14:5 | ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು. |
1901 | EXO 14:11 | ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ? |
1905 | EXO 14:15 | ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು. |
1932 | EXO 15:11 | ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ? |
1955 | EXO 16:7 | ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು. |
1956 | EXO 16:8 | ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು. |
1976 | EXO 16:28 | ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ? |
1986 | EXO 17:2 | ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು. |
1988 | EXO 17:4 | ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು. |
2014 | EXO 18:14 | ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು. |
2135 | EXO 22:20 | ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ? |
2141 | EXO 22:26 | ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು. |
2450 | EXO 32:11 | ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ? |
2461 | EXO 32:22 | ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ? |
2490 | EXO 33:16 | ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು. |
2515 | EXO 34:18 | “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ? |
2995 | LEV 10:17 | “ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ? |
4029 | NUM 11:4 | ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು? |
4036 | NUM 11:11 | ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ? |
4037 | NUM 11:12 | ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ? |
4038 | NUM 11:13 | ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು? |
4047 | NUM 11:22 | ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು. |
4048 | NUM 11:23 | ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು. |
4054 | NUM 11:29 | ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು. |
4062 | NUM 12:2 | ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು. |
4074 | NUM 12:14 | ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು. |
4095 | NUM 13:19 | ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ? |
4120 | NUM 14:11 | ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು? |
4136 | NUM 14:27 | “ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು. |
4150 | NUM 14:41 | ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ. |